ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಮತ್ತೆ ಜೀವ ಕಳೆ

ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಇದೀಗ ಮತ್ತೆ ಜೀವ ಕಳೆ ಬಂದಿದೆ. ಕುಡಿಯಲು ಹಾಗೂ ಕೃಷಿಗೆ ನೀರಿಲ್ಲದೇ ಸಂಕಷ್ಟಕ್ಕೀಡಾಗಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ. ಪರಿಣಾಮ ಸುಮಾರು ಆರು ಅಡಿಯಷ್ಟು ಕೃಷ್ಣಾ ನದಿಯ ಒಳಹರಿವು ಹೆಚ್ಚಾಗಿದೆ.
ಇನ್ನೂ ನೀರಿನ ಮಟ್ಟ ಹೆಚ್ಚುತ್ತಿರುವ ಕಾರಣ ರೈತರು ನದಿಗೆ ಅಳವಡಿಸಿದ್ದ ಪಂಪ್ಸೆಟ್ಗಳನ್ನ ತೆರುವುಗೊಳಿಸುತ್ತಿದ್ದಾರೆ. ನೀರಿನ ರಭಸ ಜೋರಾಗಿರುವುದರಿಂದ ಬಿಜಾಪುರ ಜಿಲ್ಲಾಧಿಕಾರಿ ಜನರಿಗೆ ಎಚ್ಚರವಹಿಸುವಂತೆ ಸೂಚನೆ ನೀಡಿದ್ದಾರೆ.
ಆಲಮಟ್ಟಿ ಜಲಾಶಯದ ನೀರಿನ ಮಟ್ಟ:
* ಗರಿಷ್ಠ ಮಟ್ಟ: 519.60
* ಇಂದಿನ ನೀರಿನ ಮಟ್ಟ: 508.07
* ಒಳಹರಿವು: (+)3879
* ಹೊರ ಹರಿವು: 430
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth