ನಟ ದರ್ಶನ್‌ ಅರೆಸ್ಟ್:‌ ದರ್ಶನ್‌ ಸೂಚನೆ ಮೇರೆಗೆ ನಡೆದಿತ್ತೇ ಹತ್ಯೆ? - Mahanayaka
6:13 AM Saturday 18 - October 2025

ನಟ ದರ್ಶನ್‌ ಅರೆಸ್ಟ್:‌ ದರ್ಶನ್‌ ಸೂಚನೆ ಮೇರೆಗೆ ನಡೆದಿತ್ತೇ ಹತ್ಯೆ?

darshan
11/06/2024

ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಮೈಸೂರಿನ ಫಾರ್ಮ್‌ ಹೌಸ್ ನಲ್ಲಿ‌ ಬಂಧಿಸಲಾಗಿದೆ.


Provided by

ವರದಿಗಳ ಪ್ರಕಾರ, ರೇಣುಕಾ ಸ್ವಾಮಿ ಎಂಬ ವ್ಯಕ್ತಿಯ ಹತ್ಯೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ.

ಕಾಮಾಕ್ಷಿಪಾಳ್ಯದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬವರ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಆರೋಪಿಗಳ ವಿಚಾರಣೆ ವೇಳೆ ದರ್ಶನ್‌ ಸೂಚನೆ ಮೇರೆಗೆ ಹತ್ಯೆ ಮಾಡಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ.

ಈ ಪ್ರಕರಣದಲ್ಲಿ ದರ್ಶನ್‌ ಸೇರಿದಂತೆ 10 ಜನರನ್ನು ಬಂಧಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ