ರಾಜ್ಯದ ಜನಕ್ಕೆ ಮತ್ತೊಂದು ಗುಡ್‌ ನ್ಯೂಸ್‌ ನೀಡಿದ ಸರ್ಕಾರ! - Mahanayaka

ರಾಜ್ಯದ ಜನಕ್ಕೆ ಮತ್ತೊಂದು ಗುಡ್‌ ನ್ಯೂಸ್‌ ನೀಡಿದ ಸರ್ಕಾರ!

siddaramaiah
14/06/2024


Provided by

ಬೆಂಗಳೂರು: ಸಾರ್ವಜನಿಕರ ಅಹವಾಲು, ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ ಪರಿಹಾರ ಸೂಚಿಸಲು ಜನತಾ ದರ್ಶನಕ್ಕೆ ಮರು ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ.

ಚುನಾವಣೆ ನೀತಿ ಸಂಹಿತೆ ತೆರವಾದ ಹಿನ್ನೆಲೆಯಲ್ಲಿ ಜನತಾ ದರ್ಶನ ಮರು ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಜಿಲ್ಲಾಮಟ್ಟದಲ್ಲೇ ಜನರ ಅಹವಾಲು ಆಲಿಸಿ ಪರಿಹಾರ ಸೂಚಿಸಲು ಜನತಾದರ್ಶನಕ್ಕೆ ಮರು ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.

ಜನತಾದರ್ಶನವನ್ನು ಮತ್ತೆ ಆರಂಭಿಸಬೇಕು. ಜನರ ಬೇಡಿಕೆಗಳು, ಅಹವಾಲುಗಳನ್ನು ಸ್ವೀಕರಿಸಿ ಗಂಭೀರವಾಗಿ ಪರಿಗಣಿಸಿ ಸ್ಪಂದಿಸಬೇಕು. ಆಡಳಿತವನ್ನು ಜನಪರವಾಗಿಸಲು ಏನೆಲ್ಲ ಮಾಡಬೇಕು ಎಂಬುದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಮುಖ್ಯಮಂತ್ರಿಗಳು ಸೂಕ್ತ ಮಾರ್ಗದರ್ಶನ ನೀಡಿದ್ದಾರೆ ಎಂದು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ