ಕಳ್ಳಭಟ್ಟಿ ಸಾರಾಯಿ ಕುಡಿದು 29 ಮಂದಿಯ ದಾರುಣ ಸಾವು: 60ಕ್ಕೂ ಅಧಿಕ ಮಂದಿ ಅಸ್ವಸ್ಥ - Mahanayaka

ಕಳ್ಳಭಟ್ಟಿ ಸಾರಾಯಿ ಕುಡಿದು 29 ಮಂದಿಯ ದಾರುಣ ಸಾವು: 60ಕ್ಕೂ ಅಧಿಕ ಮಂದಿ ಅಸ್ವಸ್ಥ

tamilnadu
20/06/2024


Provided by

ಕಳ್ಳಭಟ್ಟಿ ಸಾರಾಯಿ ಕುಡಿದ ಪರಿಣಾಮ 29 ಮಂದಿ ಮೃತಪಟ್ಟು 60ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದ್ದು, ಈ ಘಟನೆ ಸಂಬಂಧ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್  ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಅಕ್ರಮ ಮದ್ಯ ಪ್ಯಾಕೆಟ್ ‘ಅರಕ್’ ಸೇವಿಸಿ ಜನರು ಅಸ್ವಸ್ಥಗೊಂಡಿದ್ದರು, ಅಸ್ವಸ್ಥಗೊಂಡವರಿಗೆ ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಲಬೆರಕೆ ಮದ್ಯ ಸೇವಿಸಿ ಸಾವನ್ನಪ್ಪಿರುವ ಸುದ್ದಿ ಕೇಳಿ ನನಗೆ ಆಘಾತವಾಗಿದೆ ಮತ್ತು ದುಃಖವಾಗಿದೆ. ಈ ಪ್ರಕರಣದಲ್ಲಿ ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ಇದನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ತಕ್ಷಣವೇ ಸಮಾಜವನ್ನು ಹಾಳುಗೆಡವುವ ಇಂತಹ ಕೃತ್ಯಗಳಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸ್ಟಾಲಿನ್​ ಎಕ್ಸ್​ ನಲ್ಲಿ ಪೋಸ್ಟ್​ ಮಾಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ