ದುನಿಯಾ ವಿಜಯ್ ನಟನೆಯ ‘ಭೀಮ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ - Mahanayaka
11:58 AM Saturday 18 - October 2025

ದುನಿಯಾ ವಿಜಯ್ ನಟನೆಯ ‘ಭೀಮ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

bheema
21/06/2024

ದುನಿಯಾ ವಿಜಯ್ ನಿರ್ದೇಶಿಸಿ ನಾಯಕ ನಟನಾಗಿ ಅಭಿನಯಿಸಿರುವ ಬಹು ನಿರೀಕ್ಷಿತ ‘ಭೀಮ’ ಚಿತ್ರ  ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಸದ್ಯ ಸ್ಟಾರ್ ನಟರ ಚಿತ್ರಗಳಿಲ್ಲದೇ ಸೊರಗುತ್ತಿರುವ ಕನ್ನಡ ಚಿತ್ರರಂಗಕ್ಕೆ ಭೀಮ ಚಿತ್ರ ಬಲತುಂಬುವ ನಿರೀಕ್ಷೆ ಮೂಡಿದೆ.


Provided by

ಆಗಸ್ಟ್ 9ರಂದು’ಭೀಮ’ ಚಿತ್ರ   ತೆರೆಗೆ ಬರಲಿದೆ.  ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಆಗ್ತಿದ್ದಂತೆ ದುನಿಯಾ ವಿಜಯ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಕೃಷ್ಣ ಕ್ರಿಯೇಶನ್ಸ್ ಹಾಗೂ ಜಗದೀಶ್ ಫಿಲಂಸ್ ಬ್ಯಾನರ್ ನಲ್ಲಿ ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ದುನಿಯಾ ವಿಜಯ್ ಅವರಿಗೆ ಜೋಡಿಯಾಗಿ ಅಶ್ವಿನಿ ಅಭಿನಯಿಸಿದ್ದಾರೆ.

ಅಚ್ಯುತ್ ಕುಮಾರ್, ಕಲ್ಯಾಣಿ ರಾಜು, ಗಿರಿಜಾ, ಬ್ಲಾಕ್ ಡ್ರ್ಯಾಗನ್ ಮಂಜು, ರಂಗಾಯಣ ರಘು, ಉಳಿದ ತಾರಾ ಬಳಗದಲ್ಲಿದ್ದಾರೆ. ಚರಣ್ ರಾಜ್ ಮ್ಯೂಸಿಕ್ ಕಂಪೋಸ್ ಮಾಡಿದ್ದು, ದೀಪು ಎಸ್ ಕುಮಾರ್ ಸಂಕಲನ, ಮಾಸ್ತಿ ಅವರ ಸಂಭಾಷಣೆ, ಶಿವಸೇನಾ ಛಾಯಾಗ್ರಹಣವಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ