ತನ್ನ ವಿರುದ್ಧದ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಸೂರಜ್ ರೇವಣ್ಣ ಪ್ರತಿಕ್ರಿಯೆ!

ಹಾಸನ: ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಹೊಳೆನರಸೀಪುರ ತಾಲೂಕಿನ ಗನ್ನಿಕಡ ಫಾರ್ಮ್ ಹೌಸ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಷಡ್ಯಂತ್ರ ಎಷ್ಟು ದಿನದಿಂದ ನಡೆಯುತ್ತಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದು, ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ಆರೋಪವನ್ನು ಖಡಾಖಂಡಿತವಾಗಿ ತಿರಸ್ಕಾರ ಮಾಡುತ್ತೇನೆ ಎಂದು ಅವರು ಹೇಳಿದ್ದಾರೆ.
ಕಾನೂನು ವ್ಯವಸ್ಥೆಯಲ್ಲಿ ಏನು ತೀರ್ಮಾನ ಆಗಬೇಕು ಆಗುತ್ತೆ, ಅವನ ಮೇಲೆಯೂ ಎಫ್ ಐಆರ್ ಆಗಿದೆ. ಕಾನೂನಿನಲ್ಲಿ ತನಿಖೆ ಆಗಲಿ, ಸತ್ಯಾಸತ್ಯತೆ ಹೊರಗೆ ಬರಲಿ. ಸತ್ಯ ಏನಿದೆ ಅದು ಹೊರಗೆ ಬಂದೇ ಬರುತ್ತದೆ. ನಾಡಿನ ಕಾನೂನಿನ ಮೇಲೆ ನನಗೆ ವಿಶ್ವಾಸವಿದೆ ಎಂದರು.
ಇದು ಸಂಪೂರ್ಣ ರಾಜಕೀಯ ಷಡ್ಯಂತ್ರ. ಅದರ ಬಗ್ಗೆ ನಾನು ಇವತ್ತು ಏನು ಪ್ರತಿಕ್ರಿಯೆ ಕೊಡಲ್ಲ. ಇಂತಹವರು, ಅಂತಹವರು, ಅವರು, ಇವರು ಮಾಡಿದರು ಎಂದು ನಾನು ಚರ್ಚೆ ಮಾಡಲು ಹೋಗಲ್ಲ, ತನಿಖೆ ಪ್ರಗತಿಯಲ್ಲಿದೆ, ಸತ್ಯಾಸತ್ಯತೆ ಹೊರಗೆ ಬರುತ್ತೆ. ಇಡೀ ರಾಜ್ಯದ ಜನತೆ ಅದನ್ನು ನೋಡುತ್ತಾರೆ ಎಂದು ಸೂರಜ್ ಪ್ರತಿಕ್ರಿಯೆ ನೀಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97