ದಕ್ಷಿಣ ಕನ್ನಡ: ಕಂಪೌಂಡ್ ಕುಸಿದು ಒಂದೇ ಮನೆಯ ನಾಲ್ವರು ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಇದೀಗ ಮಳೆಯ ಪರಿಣಾಮ ಕಂಪೌಂಡ್ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ.
ರಿಹಾನ ಮಂಝಿಲ್ ಮನೆಯ ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಹಾನ (11)ಮತ್ತು ರಿಫಾನ (17) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ, ಕುಸಿದು ದುರಂತ ಸಂಭವಿಸಿದೆ.
ರಾತ್ರಿ ಊಟ ಮುಗಿಸಿ ಮನೆಯಲ್ಲಿ ಇಬ್ಬರು ಪುತ್ರಿಯರು ಹಾಗೂ ದಂಪತಿ ಮಲಗಿದ್ದರು. ರಾತ್ರಿಯಿಡೀ ಮಳೆಯಾದ ಪರಿಣಾಮ ಕಂಪೌಂಡ್ ವಾಲ್ ಹಾಗೂ ಅಡಿಕೆ ಮರಗಳು ಯಾಸಿರ್ ಅವರ ಮನೆಯ ಮೇಲೆ ಕುಸಿದು ಬಿದ್ದಿದೆ.
6 ವರ್ಷ ಗಳ ಹಿಂದೆ ಈ ಮನೆಯನ್ನು ಖರೀದಿಸಿ ಲೀಸ್ ಗೆ ನೀಡಿದ್ದರು. ಇದೀಗ 6 ತಿಂಗಳ ಹಿಂದೆಯಷ್ಟೇ ಮನೆಗೆ ವಾಪಸ್ ಆಗಿದ್ದರು. ಎರಡು ವರ್ಷಗಳ ಹಿಂದೆಯೂ ಮನೆ ಮೇಲೆ ಇದೇ ರೀತಿ ಕಂಪೌಂಡ್ ಕುಸಿದಿತ್ತು. ಆದರೆ ಯಾವುದೇ ಪ್ರಾಣಾಪಾಯವಾಗಿರಲಿಲ್ಲ. ಇದೀಗ ನಾಲ್ವರ ಪ್ರಾಣ ಹೊರಟು ಹೋಗಿದೆ.
ಅವಶೇಷಗಳಡಿ ಸಿಲುಕಿದ್ದ ನಾಲ್ಕು ಮೃತದೇಹಗಳನ್ನು ಹೊರ ತೆಗೆಯಲು ಸುಮಾರು 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿಯ ಕಾರ್ಯಾಚರಣೆಗೆ ಸ್ಥಳೀಯರು ಕೈಜೋಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97