ಸ್ವಾಮೀಜಿ ಹೇಳಿದ್ರು ಅಂತ ಸಿಎಂ ಬದಲಾವಣೆ ಮಾಡಬೇಕೆ?: ಶಾಮನೂರು ಶಿವಶಂಕರಪ್ಪ ತಿರುಗೇಟು

ದಾವಣಗೆರೆ: ಸ್ವಾಮೀಜಿ ಹೇಳಿದ್ರು ಅಂತ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಲು ಆಗುತ್ತದೆಯೇ ಎಂದು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವದಲ್ಲಿ ಶ್ರೀ ಚಂದ್ರಶೇಖರ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸಿಎಂ ಸಿದ್ದರಾಮಯ್ಯನವರಿಗೆ ವೇದಿಕೆಯಲ್ಲೇ ಹೇಳಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಾಮನೂರು ಶಿವಶಂಕರಪ್ಪ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಸ್ವಾಮೀಜಿಯವರು ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಮುಖ್ಯಮಂತ್ರಿ ಬದಲಾವಣೆ ಸಾಧ್ಯವೇ ಎಂದು ಪತ್ರಕರ್ತರಿಗೆ ಮರು ಪ್ರಶ್ನೆ ಹಾಕಿದರು.
ಸಿದ್ದರಾಮಯ್ಯ ಅವರು ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದಾರೆ , ಮುಖ್ಯಮಂತ್ರಿಗಳ ಬದಲಾವಣೆಯ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು ನಾವು ಹೇಳೋಕೆ ಸಾಧ್ಯವೆ ಎಂದರು.
ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಮುಖ್ಯಮಂತ್ರಿ ಬದಲಾವಣೆ ಮಾಡಬೇಕು ಎಂದಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿಗೇನು ಗೊತ್ತು. ಯಾರೋ ಚಾರ್ಜ್ ಮಾಡಿ ಹಿಂಗೆ ಹೇಳು ಅಂತಿರಬೇಕು ಎಂದು ಟಾಂಗ್ ನೀಡಿದರು.
ಜಾತಿವಾರು ಡಿಸಿಎಂ ಕೇಳುತ್ತಿದ್ದಾರೆ. ಅದೆಲ್ಲ ಸುಮ್ಮನೆ ಆಗಲ್ಲ. ಮಾಡಲ್ಲ. ಏನೇ ಮಾಡಿದರೂ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದು ಅವರು ಸ್ಪಷ್ಟಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97