ಭಾರೀ ಮಳೆ ಹಿನ್ನೆಲೆ, ಜೂನ್ 28ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತೀವ್ರವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂನ್ 28ರಂದು ಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.
ಜಿಲ್ಲೆಯ ಅಂಗನವಾಡಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂನ್ 28ರಂದು ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಈಗಾಗಲೇ ಮಳೆಯ ಪರಿಣಾಮ 6 ಮಂದಿ ಜೀವ ಕಳೆದುಕೊಂಡಿದ್ದಾರೆ.
ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರು.
ಗುರುವಾರ ಬೆಳಗ್ಗೆ ಮಂಗಳೂರು ನಗದ ರೊಸಾರಿಯೋ ಶಾಲೆಯ ಬಳಿ ಆಟೋ ತೊಳೆಯುತ್ತಿದ್ದ ವೇಳೆ ವಿದ್ಯುತ್ ತಂತಿ ಬಿದ್ದು ಇಬ್ಬರು ಆಟೋ ಚಾಲಕರು ಮೃತಪಟ್ಟ ಘಟನೆ ನಡೆದಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97