ಉತ್ತರಾಖಂಡದ ಚಮೋಲಿ-ಬದರೀನಾಥ್ ಹೆದ್ದಾರಿ ತಡೆ: ಹಲವು ಜಿಲ್ಲೆಗಳಲ್ಲಿ ಕಟ್ಟೆಚ್ಚರ - Mahanayaka
2:13 PM Wednesday 29 - October 2025

ಉತ್ತರಾಖಂಡದ ಚಮೋಲಿ-ಬದರೀನಾಥ್ ಹೆದ್ದಾರಿ ತಡೆ: ಹಲವು ಜಿಲ್ಲೆಗಳಲ್ಲಿ ಕಟ್ಟೆಚ್ಚರ

07/07/2024

ಉತ್ತರಾಖಂಡದ ಚಮೋಲಿ-ಬದರೀನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಮಳೆಯಿಂದಾಗಿ ಬಂಡೆಗಳು ರಸ್ತೆಗೆ ಬಿದ್ದ ಕಾರಣ ಭಾನುವಾರ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ
ರಸ್ತೆಯನ್ನು ತೆರವುಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ.
ಕುಮಾವೂನ್, ಚಮೋಲಿ, ಪೌರಿ ಮತ್ತು ರುದ್ರಪ್ರಯಾಗ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಇನ್ನು ಈ ರಾಜ್ಯದ ಇತರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ 200 ಕ್ಕೂ ಹೆಚ್ಚು ರಸ್ತೆಗಳನ್ನು ನಿರ್ಬಂಧಿಸಿರುವುದರಿಂದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಜಾಗರೂಕರಾಗಿರಲು ಸೂಚಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ತಂಡಗಳು ಸಹ ಜಾಗರೂಕವಾಗಿ ಕಾರ್ಯಾಚರಿಸುತ್ತಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ