ಹತ್ರಾಸ್ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ಕೊಡಿ: ಸಿಎಂ ಯೋಗಿಗೆ ರಾಹುಲ್ ಗಾಂಧಿ ಪತ್ರ
ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ ನಂತರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದು ಪರಿಹಾರವನ್ನು ಹೆಚ್ಚಿಸುವಂತೆ ಮತ್ತು ಸಂತ್ರಸ್ತೆಯ ಕುಟುಂಬಕ್ಕೆ ತಕ್ಷಣದ ಸಹಾಯವನ್ನು ನೀಡುವಂತೆ ಒತ್ತಾಯಿಸಿದ್ದಾರೆ.
ಹತ್ರಾಸ್ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಉತ್ತರ ಪ್ರದೇಶ ಸರ್ಕಾರ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿತ್ತು ಮತ್ತು ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡುವುದಾಗಿ ಘೋಷಿಸಿತ್ತು.
ಭೋಲೆ ಬಾಬಾ ಆಯೋಜಿಸಿದ್ದ ಸತ್ಸಂಗದ ವೇಳೆ ಈ ಘಟನೆ ನಡೆದಿದ್ದು, ಕನಿಷ್ಠ 121 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದರು.
ಹತ್ರಾಸ್ ಸಂತ್ರಸ್ತರನ್ನು ಭೇಟಿಯಾದ ನಂತರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ ಮತ್ತು ಹತ್ರಾಸ್ ನಲ್ಲಿ ಕಾಲ್ತುಳಿತ ಅಪಘಾತದಿಂದ ಬಾಧಿತರಾದ ಸಂತ್ರಸ್ತರ ಕುಟುಂಬಗಳನ್ನು ಭೇಟಿಯಾದ ನಂತರ ಅವರ ದುಃಖವನ್ನು ಅನುಭವಿಸಿದ ನಂತರ ಮತ್ತು ಅವರ ಸಮಸ್ಯೆಗಳನ್ನು ತಿಳಿದ ನಂತರ ನಾನು ಉತ್ತರ ಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ ಅವರಿಗೆ ಪತ್ರದ ಮೂಲಕ ಅವರ ಬಗ್ಗೆ ಮಾಹಿತಿ ನೀಡಿದ್ದೇನೆ ಅಂದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth




























