ನಾಪತ್ತೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿಯ ಮೃತದೇಹ ಪತ್ತೆ! - Mahanayaka

ನಾಪತ್ತೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿಯ ಮೃತದೇಹ ಪತ್ತೆ!

pooja
08/07/2024


Provided by

ಶಿವಮೊಗ್ಗ: ನಾಪತ್ತೆಯಾಗಿದ್ದ ಧರ್ಮಸ್ಥಳ ಸಂಘದ  ಸೇವಾ ಪ್ರತಿನಿಧಿಯ ಮೃತದೇಹ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.

ಆಗುಂಬೆಯ ಪೂಜಾ (24) ಮೃತಪಟ್ಟವರಾಗಿದ್ದಾರೆ. ಇವರು ಜೂನ್ 30ರಂದು ನಾಪತ್ತೆಯಾಗಿದ್ದರು.  ಘಟನೆ ಸಂಬಂಧ ತನಿಖೆ ಕೈಗೊಂಡಿದ್ದ ನಾಲೂರಿನ ಮಣಿ ಪೊಲೀಸರು ಪೂಜಾ ಅವರ ಸ್ನೇಹಿತನನ್ನು ವಿಚಾರಣೆ ನಡೆಸಿದ ವೇಳೆ ತಾನೇ ಕತ್ತು ಹಿಸುಕಿ ಕೊಲೆ ಮಾಡಿ ಹೊಂಡದಲ್ಲಿ ಮೃತದೇಹವನ್ನು ಹಾಕಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಜೂನ್ 30ರಂದು ಮನೆ ಕೆಲಸಕ್ಕೆ ಹೋಗಿದ್ದ ಪೂಜಾ ಏಕಾಏಕಿ ಕಾಣೆಯಾಗಿದ್ದಳು. ಮಗಳು ಮನೆಗೆ ಬಾರದ ಹಿನ್ನೆಲೆ ಪೋಷಕರು ಆತಂಕಕ್ಕೊಳಗಾಗಿದ್ದರು. ಎಲ್ಲೆಡೆ ಹುಡುಕಾಟ ನಡೆಸಿದ್ದರು. ಬಳಿಕ ಆಗುಂಬೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

manikantta

ಪೂಜಾಗೆ  ಹಲವು ವರ್ಷಗಳಿಂದ ಸ್ನೇಹಿತನಾಗಿದ್ದ ಮಣಿಕಂಠ ಎನ್ನುವಾತನನ್ನು ಪೊಲೀಸರು ತಮ್ಮದೇ ಸ್ಟೈಲ್‌ ನಲ್ಲಿ ವಿಚಾರಣೆ ನಡೆಸಿದ್ದು,  ಆ ವೇಳೆ ಪೂಜಾಳನ್ನು ತಾನೇ ಕೊಂದಿದ್ದಾಗಿ ಮಣಿಕಂಠ ಒಪ್ಪಿಕೊಂಡಿದ್ದಾನೆ. ಹಣಕಾಸಿ‌ ವಿಚಾರಕ್ಕೆ ಜಗಳ ನಡೆದು ಕೊಲೆ ಮಾಡಿರುವುದು ತಿಳಿದು ಬಂದಿದೆ. ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ