ಉಡುಪಿಯಲ್ಲಿ ಭಾರೀ ಮಳೆ ಹಿನ್ನೆಲೆ ಜು.9ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ - Mahanayaka

ಉಡುಪಿಯಲ್ಲಿ ಭಾರೀ ಮಳೆ ಹಿನ್ನೆಲೆ ಜು.9ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

rain
08/07/2024


Provided by

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು, ತೀವ್ರ ಮಳೆಯ ಹಿನ್ನೆಲೆ ಹವಾಮಾನ ಇಲಾಖೆ ರೆಡ್  ಅಲರ್ಟ್ ನೀಡಿದೆ. ಈ ಹಿನ್ನೆಲೆ ಜುಲೈ 9ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್.  ತಿಳಿಸಿದ್ದಾರೆ.

ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐಗಳಿಗೆ ರಜೆಯನ್ನು ಘೋಷಿಸಲಾಗಿಲ್ಲ  ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ