ನೀಟ್ ಯುಜಿ ವಿವಾದ: ಮರು ಪರೀಕ್ಷೆ ಕುರಿತು ಖಡಕ್ ಹೇಳಿಕೆ ನೀಡಿದ ಸುಪ್ರೀಂಕೋರ್ಟ್ - Mahanayaka
2:51 PM Friday 11 - September 2026

ನೀಟ್ ಯುಜಿ ವಿವಾದ: ಮರು ಪರೀಕ್ಷೆ ಕುರಿತು ಖಡಕ್ ಹೇಳಿಕೆ ನೀಡಿದ ಸುಪ್ರೀಂಕೋರ್ಟ್

08/07/2024

ನೀಟ್-ಯುಜಿ ಮರುಪರೀಕ್ಷೆಗಾಗಿ ಬೇಡಿಕೆಗಳನ್ನು ಸದ್ಯ ಪಕ್ಕಕ್ಕಿರಿಸಿರುವ ಸರ್ವೋಚ್ಚ ನ್ಯಾಯಾಲಯವು, ಮರುಪರೀಕ್ಷೆಗೆ ಆದೇಶಿಸುವುದು ವಂಚನೆ ನಡೆಸದ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮವನ್ನುಂಟು ಮಾಡುತ್ತದೆ ಎಂದು ಹೇಳಿದೆ. ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸಮಿತಿಯು ತನಿಖೆ ನಡೆಸಬೇಕು ಎಂದು ಹೇಳಿದೆ.

ಮೇ 5ರಂದು ಪರೀಕ್ಷೆಗೆ ಕನಿಷ್ಠ 24 ಗಂಟೆಗಳ ಮೊದಲು ಸಾಮಾಜಿಕ ಮಾಧ್ಯಮಗಳು ಮತ್ತು ಟೆಲಿಗ್ರಾಂ ಹಾಗೂ ವಾಟ್ಸ್‌ಆ್ಯಪ್‌ನಂತಹ ಜನಪ್ರಿಯ ಮೆಸೇಜಿಂಗ್ ಆ್ಯಪ್‌ಗಳ ಮೂಲಕ ಪ್ರಶ್ನೆಗಳು ಸೋರಿಕೆಯಾಗಿದ್ದನ್ನು ನ್ಯಾಯಾಲಯವು ಒಪ್ಪಿಕೊಂಡಿತು, ಆದರೆ ಸೋರಿಕೆಯಾಗಿದ್ದ ಪ್ರಶ್ನೆಗಳ ಹರಡುವಿಕೆಯ ಬಗ್ಗೆ ಸ್ಪಷ್ಟತೆಯ ಕೊರತೆಯನ್ನು ಬೆಟ್ಟು ಮಾಡಿತು.

ಎಷ್ಟು ವಿದ್ಯಾರ್ಥಿಗಳು ವಂಚಿಸಿದ್ದರು ಎನ್ನುವುದನ್ನು ತಿಳಿದುಕೊಳ್ಳದೆ ಮರುಪರೀಕ್ಷೆಗೆ ಆದೇಶಿಸುವುದು ವಂಚನೆಯನ್ನು ನಡೆಸದ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮವನ್ನುಂಟು ಮಾಡುತ್ತದೆ. ಮರು ಪರೀಕ್ಷೆಯು ತನ್ನ ಕೊನೆಯ ಆಯ್ಕೆಯಾಗಿದೆ ಎಂದು ಅದು ಸ್ಪಷ್ಟಪಡಿಸಿದೆ. ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ತಿಳಿಸಿತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti