ರಸ್ತೆ ಮಧ್ಯೆಯೇ ಹೊತ್ತಿ ಉರಿದ ಬಿಎಂಟಿಸಿ ಬಸ್

ಬೆಂಗಳೂರು: ಬಿಎಂಟಿಸಿ ಬಸ್ಸೊಂದು ರಸ್ತೆ ಮಧ್ಯೆಯೇ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಎಂ.ಜಿ.ರಸ್ತೆಯ ( M.G.Road) ಅನಿಲ್ ಕುಂಬ್ಳೆ ಸರ್ಕಲ್ ಬಳಿ ನಡೆದಿದೆ.
ರೋಸ್ ಗಾರ್ಡನ್ ನಿಂದ ಶಿವಾಜಿನಗರದ ಕಡೆಗೆ ಬಸ್ ಸಂಚರಿಸುತ್ತಿತ್ತು. ಈ ವೇಳೆ ಏಕಾಏಕಿ ಬಸ್ ನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಅಪಾಯ ಅರಿತ ಚಾಲಕ ಬಸ್ ನಿಲ್ಲಿಸಿದ್ದಾರೆ. ಈ ವೇಳೆ ಚಾಲಕ ಹಾಗೂ ನಿರ್ವಾಹಕ ಪ್ರಯಾಣಿಕರನ್ನು ಕೆಳಗೆ ಇಳಿಸಿ ನಡೆಯಬಹುದಾಗಿದ್ದ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ.
ಘಟನೆ ನಡೆದ ವೇಳೆ ಬಸ್ ನಲ್ಲಿ 30 ಜನ ಪ್ರಯಾಣಿಕರಿದ್ದರು ಎಂದು ಬಸ್ ನ ನಿರ್ವಾಹಕ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಬಸ್ ಗೆ ಬೆಂಕಿ ಹತ್ತಿಕೊಂಡ ಪರಿಣಾಮ ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ರಸ್ತೆ ಮಧ್ಯೆ ನಡೆದ ಘಟನೆಯಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಟ್ರಾಫಿಕ್ ಜಾಮ್ ಕ್ಲೀಯರ್ ಮಾಡಿ, ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
ಬಸ್ ಗೆ ಬೆಂಕಿ ಹತ್ತಿಕೊಳ್ಳಲು ಕಾರಣ ಏನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬಿಎಂಟಿಸಿ ಸಿಬ್ಬಂದಿ ಹಾಗೂ ಮೆಕ್ಯಾನಿಕ್ ಗಳು ಆಗಮಿಸಿದ್ದು, ಬಸ್ ನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97