ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 825 ಹುದ್ದೆಗಳ ನೇಮಕಾತಿ:  ಈಗಲೇ ಅರ್ಜಿ ಸಲ್ಲಿಸಿ - Mahanayaka

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 825 ಹುದ್ದೆಗಳ ನೇಮಕಾತಿ:  ಈಗಲೇ ಅರ್ಜಿ ಸಲ್ಲಿಸಿ

job news
11/07/2024


Provided by

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ  ಖಾಲಿ ಇರುವಂತಹ 825 ಹಾಸ್ಟಲ್ ವಾರ್ಡನ್ ಹುದ್ದೆಗಳು ಹಾಗೂ ಇತರೆ ಹುದ್ದೆಗಳ ನೇಮಕಾತಿಗೆ ಸರ್ಕಾರವು ಅನುಮೋದನೆ ನೀಡಿದೆ.

ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸರಕಾರವು ಶೀಘ್ರದಲ್ಲಿ ಅಧಿಸೂಚನೆಯನ್ನು ಹೊರಡಿಸಲಿದ್ದು, ಹಾಸ್ಟೆಲ್ ವಾರ್ಡನ್, ಕಾವಲುಗಾರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಶೀಘ್ರದಲ್ಲಿ ಅಧಿಸೂಚನೆ ಹೊರಬೀಳಲಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಈ ಒಂದು ನೇಮಕಾತಿಯ ಬಗ್ಗೆ ಅರ್ಹತೆಗಳ ಮಾಹಿತಿ, ಖಾಲಿ ಇರುವ ವಿವಿಧ ಹುದ್ದೆಗಳ ಮಾಹಿತಿ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಿಂದ ತಿಳಿದುಕೊಂಡು ಇದನ್ನು ಸದುಪಯೋಗಪಡಿಸಿಕೊಳ್ಳಿ.

BCWD Recruitment 2024: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ:

* ಹಾಸ್ಟೆಲ್ ವಾರ್ಡನ್ ಹುದ್ದೆಗಳು – 150

* ಅಡುಗೆಯವರು ಹುದ್ದೆಗಳು – 300

* ಅಡುಗೆ ಸಹಾಯಕರು ಹುದ್ದೆಗಳು – 300

* ರಾತ್ರಿ ಕಾವಲುಗಾರ ಹುದ್ದೆಗಳು – 75

* ಈ ಎಲ್ಲಾ ಹುದ್ದೆಗಳನ್ನು ಸೇರಿ ಒಟ್ಟು 825 ಹುದ್ದೆಗಳು ಖಾಲಿ ಇವೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕೆಳಗಿನ ವಿದ್ಯಾರ್ಹತೆ ಹೊಂದಿರುವುದು ಕಡ್ಡಾಯ :

ಹಾಸ್ಟೆಲ್ ವಾರ್ಡನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಪದವಿ ಮುಗಿಸಬೇಕು. ಅದೇ ರೀತಿ ಅಡುಗೆಯವರ ಹುದ್ದೆಗಳ ಹಾಗೂ ಅಡುಗೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು. ಕಾವಲುಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವರ 10ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ ಎಷ್ಟಿರಬೇಕು?:

ಅರ್ಜಿ ಸಲ್ಲಿಸುವವರು ಕನಿಷ್ಠ 18 ವರ್ಷ ಹೊಂದಿರಬೇಕು ಮತ್ತು ಗರಿಷ್ಠ 35 ವರ್ಷದ ಒಳಗಿರಬೇಕು ಎಂದು ತಿಳಿಸಲಾಗಿದೆ. ಒಂದು ವೇಳೆ ನೀವು ಮೀಸಲಾತಿ ವ್ಯಾಪ್ತಿಯಲ್ಲಿ ಇದ್ದರೆ ನಿಮಗೆ ಸಡಿಲಿಕೆ ನೀಡಲಾಗುತ್ತದೆ.

ಕರ್ನಾಟಕ ರಾಜ್ಯದ್ಯಂತ ಹೊಸ ವಸತಿ ನಿಲಯ ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿರುವುದರಿಂದ, ಈ ಹೊಸ ವಸತಿ ನಿಲಯಗಳಿಗೆ ಅವಶ್ಯಕಥೆ ಇರುವ ಈ ಒಂದು 825 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸರ್ಕಾರಕ್ಕೆ ಸೂಚನೆ ಸಲ್ಲಿಸಿದ್ದು ಇದಕ್ಕೆ ಸರ್ಕಾರವು ಅನುಮೋದನೆ ನೀಡಿದೆ.

ಈ ನೇಮಕಾತಿಯನ್ನು ಕರ್ನಾಟಕ ಲೋಕಸೇವಾ ಆಯೋಗವು ನೇಮಕಾತಿ ಮಾಡಿಕೊಳ್ಳುತ್ತಿದ್ದು, ಕರ್ನಾಟಕ ಲೋಕಸೇವಾ ಆಯೋಗ ಅಥವಾ ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ಅಧಿಕೃತ ಜಾಲತಾಣದಲ್ಲಿ ಶೀಘ್ರದಲ್ಲಿಯೇ ಅಧಿಕೃತ ಅಧಿಸೂಚನೆ ಹೊರಬೀಳಲಿದೆ.

ಜಾಲತಾಣ : www.kpsc.kar.nic.in


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ