ಕರಾವಳಿಯಲ್ಲಿ ಭರ್ಜರಿ ಮಳೆ: ರಾಜ್ಯದಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ - Mahanayaka
10:44 AM Saturday 27 - December 2025

ಕರಾವಳಿಯಲ್ಲಿ ಭರ್ಜರಿ ಮಳೆ: ರಾಜ್ಯದಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

rain
15/07/2024

ಬೆಂಗಳೂರು:  ರಾಜ್ಯಾದ್ಯಂತ ಮುಂದಿನ 5 ದಿನಗಳಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿಯಲ್ಲಿ ಈಗಾಗಲೇ ಭರ್ಜರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಮೂರು ಜಿಲ್ಲೆಗಳಿಗೂ ಇಂದು ಹಾಗೂ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ನಂತರದ ಮೂರು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇನ್ನೂ ಬೆಂಗಳೂರಿನಲ್ಲಿ ಕೂಡ ಸಾಧಾರಣ ಅಥವಾ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಮೂರ್ನಾಲ್ಕು ದಿನ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ