ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಹೆಬ್ಬಾಳ ಸೇತುವೆ  ಮುಳುಗಡೆ: ಉಕ್ಕಿ ಹರಿದ ಭದ್ರಾ ನದಿ - Mahanayaka

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಹೆಬ್ಬಾಳ ಸೇತುವೆ  ಮುಳುಗಡೆ: ಉಕ್ಕಿ ಹರಿದ ಭದ್ರಾ ನದಿ

hebbale setuve
16/07/2024


Provided by

ಚಿಕ್ಕಮಗಳೂರು:  ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಮುಂದುವರೆದಿದೆ.  ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮ ಅಪಾಯದ ಮಟ್ಟ ಮೀರಿ  ಭದ್ರಾ ನದಿ ಹರಿಯುತ್ತಿದೆ.

ಮಳೆಗಾಲದಲ್ಲಿ ಈ ಭಾರೀ ಮೊದಲ ಸಲ ಹೆಬ್ಬಾಳ ಸೇತುವೆ  ಮುಳುಗಡೆಯಾಗಿದೆ.  ಭದ್ರಾ ನದಿ ಅಬ್ಬರಕ್ಕೆ ಹೆಬ್ಬಾಳ ಸೇತುವೆ ಮುಳುಗಿದೆ.

ಕಳಸ ತಾಲೂಕಿನ ಹೊರನಾಡು ಬಳಿಯ ಹೆಬ್ಬಾಳೆ ಸೇತುವೆ  ಮುಳುಗಡೆಯಿಂದಾಗಿ ಹೊರನಾಡು–ಕಳಸ ಸಂಪರ್ಕ ಕಡಿತವಾಗಿದೆ.

ಕಳೆದ ರಾತ್ರಿಯಿಂದಲೂ ಸೇತುವೆಯ ಮೇಲೆ ಭದ್ರಾ ನದಿ ಉಕ್ಕಿ ಹರಿದಿದೆ. ಸದ್ಯ  ಮುನ್ನೆಚ್ಚರಿ ಕಾರ್ಯಕ್ರಮವಾಗಿ ಸೇತುವೆಯ ಎರಡು ಕಡೆ ಬ್ಯಾರಿಕೇಡ್ ಅಳವಡಿಸಲಾಗಿದೆ.  ಹೆಬ್ಬಾಳೆ ಸೇತುವೆಯ ಮೇಲೆ ವಾಹನಗಳ ಸಂಚಾರ ನಿಷೇಧ ಮಾಡಲಾಗಿದ್ದು,  ಸೇತುವೆ ಬಳಿ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ