ಚಲಿಸುತ್ತಿದ್ದಾಗಲೇ ಕಳಚಿ ಬಿತ್ತು ಬಸ್ ನ ಟಯರ್: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ - Mahanayaka

ಚಲಿಸುತ್ತಿದ್ದಾಗಲೇ ಕಳಚಿ ಬಿತ್ತು ಬಸ್ ನ ಟಯರ್: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

sugama
17/07/2024


Provided by

ಚಿಕ್ಕಮಗಳೂರು:  ಮಳೆಯಲ್ಲಿ ಬಸ್ ಚಲಿಸುತ್ತಿದ್ದಾಗಲೇ ಟಯರ್ ಕಳಚಿ ಬಿದ್ದ ಘಟನೆ  ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರೋಟರಿ ಸರ್ಕಲ್ ನಲ್ಲಿ ನಡೆದಿದೆ.

ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿದ್ದ ಖಾಸಗಿ ಬಸ್  ಚಲಿಸುವಾಗಲೇ ಹಿಂಬದಿ ಟೈರ್ ಕಳಚಿ ಹೋಗಿದ್ದು,  ಏಕಕಾಲಕ್ಕೆ ಬಸ್ಸಿನ ಎರಡು ಟೈಯರ್ ಗಳು ಕಳಚಿ ಬೀಳುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಸ್  ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿತ್ತು.  ಘಾಟಿ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದರೆ ಮಹಾ ದುರಂತವೇ ನಡೆಯುತ್ತಿತ್ತು.  ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.  ಬಾಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ