ಚಿಕ್ಕಮಗಳೂರು: ತುಂಗಾ ನದಿ ಅಬ್ಬರಕ್ಕೆ ಶೃಂಗೇರಿಯಲ್ಲಿ ನೆರೆ ಪರಿಸ್ಥಿತಿ ಸೃಷ್ಟಿ

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ತುಂಗಾ ನದಿ ಅಬ್ಬರಕ್ಕೆ ಶೃಂಗೇರಿಯಲ್ಲಿ ನೆರೆ ಪರಿಸ್ಥಿತಿ ಸೃಷ್ಟಿಯಾಗಿದೆ.
ತುಂಗಾ ನದಿ ಅಂಚಿನ ಗ್ರಾಮಗಳಲ್ಲಿ ತೋಟಗಳು ಜಲಾವೃತವಾಗಿವೆ. ಶೃಂಗೇರಿ ತಾಲೂಕಿನ ಕೂತಗೋಡು ವ್ಯಾಪ್ತಿಯ ಬೆಟ್ಟಗೇರೆ, ಕೆರೆಮನೆ ಗ್ರಾಮಗಳಲ್ಲಿ ಈ ಘಟನೆ ನಡೆದಿದೆ.
ಇನ್ನೊಂದೆಡೆ ತುಂಗಾ ನದಿ ಅಬ್ಬರ ಕಡಿಮೆಯಾಗುವಂತೆ ತುಂಗಾ ನದಿಗೆ ಸ್ಥಳೀಯರು ಪೂಜೆ ಸಲ್ಲಿಸುತ್ತಿದ್ದಾರೆ. ತುಂಗಾ ನದಿ ಉಕ್ಕಿದ ಪರಿಣಾಮ ತೋಟಗಳು ಮುಳುಗಡೆಯಾಗಿವೆ. ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿವೆ.
ಕಳೆದ ಮೂರು ದಿನಗಳಿಂದ ತುಂಗಾ ನದಿ ಪ್ರವಾಹ ಕಡಿಮೆಯಾಗಿಲ್ಲ, ನೆರೆ ತಗ್ಗಲಿ ಎಂದು ತುಂಗಾ ನದಿಗೆ ಇಲ್ಲಿನ ಜನರು ಪೂಜೆ ಸಲ್ಲಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97