ಬೆಳ್ತಂಗಡಿ: ಕುಂಟಾಲಪಲ್ಕೆ ಸೇತುವೆ ಬಳಿ ಗುಡ್ಡ ಕುಸಿತ: ವಾಹನ ಸಂಚಾರ ಸ್ಥಗಿತ - Mahanayaka
12:14 PM Saturday 12 - September 2026

ಬೆಳ್ತಂಗಡಿ: ಕುಂಟಾಲಪಲ್ಕೆ ಸೇತುವೆ ಬಳಿ ಗುಡ್ಡ ಕುಸಿತ: ವಾಹನ ಸಂಚಾರ ಸ್ಥಗಿತ

belthagady
19/07/2024

ಬೆಳ್ತಂಗಡಿ: ತಾಲೂಕಿನಾದ್ಯಂತ ಕಳೆದ ರಾತ್ರಿ ಧಾರಾಕಾರ ಮಳೆಯಾಗಿದ್ದು, ಮಳೆಯ ಪರಿಣಾಮ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಕಲ್ಲರ್ಬಿ ಎಂಬಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ.

ಗುಡ್ಡ ರಸ್ತೆಗೆ ಕುಸಿದು ಬಿದ್ದಿದೆ. ಇದರಿಂದಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ, ಪಂಚಾಯತ್ ಸದಸ್ಯರು ಭೇಟಿ ನೀಡಿದ್ದಾರೆ.

ಸದ್ಯ ಲೋಕೋಪಯೋಗಿ ಇಲಾಖೆ ಹಾಗೂ ಅರಣ್ಯ ಇಲಾಖೆಯಿಂದ ಮಣ್ಣ ತೆರವು ಕಾರ್ಯಾಚರಣೆ ಆರಂಭಗೊಂಡಿದ್ದು, ಕಾರ್ಯಾಚರಣೆ ಮುಗಿಯುವವರೆಗೂ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ವಾಹನ ಸವಾರರಿಗೆ ಸೂಚನೆ ನೀಡಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler