ಮಳೆ ಅನಾಹುತ: ಗೋಡೆ ಕುಸಿದು ಬಿದ್ದು ಮೂವರ ದಾರುಣ ಸಾವು: ಮೂವರು ಸ್ಥಿತಿ ಗಂಭೀರ - Mahanayaka

ಮಳೆ ಅನಾಹುತ: ಗೋಡೆ ಕುಸಿದು ಬಿದ್ದು ಮೂವರ ದಾರುಣ ಸಾವು: ಮೂವರು ಸ್ಥಿತಿ ಗಂಭೀರ

haveri
19/07/2024


Provided by

ಹಾವೇರಿ: ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಗೋಡೆ ಕುಸಿದು ಬಿದ್ದು ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಚೆನ್ನಮ್ಮ (30), ಅಮೂಲ್ಯ (3), ಅನನ್ಯಾ (6) ಮೃತಪಟ್ಟವರು ಎಂದು ವರದಿಯಾಗಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸವಣೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೃದ್ಧೆ ಯಲ್ಲಮ್ಮ, ಪುತ್ರ ಮುತ್ತು, ಸೊಸೆ ಸುನೀತಾ ಗಾಯಾಳುಗಳು ಎಂದು ತಿಳಿದು ಬಂದಿದೆ.

ಜುಲೈ19ರ ನಸುಕಿನ ಜಾವ ಸುಮಾರು 3:30ಕ್ಕೆ ಈ ದುರ್ಘಟನೆ ನಡೆದಿದೆ. ಆರು ಜನರ ಮೇಲೆ ಗೋಡೆ ಕುಸಿದು ಬಿದ್ದಿದೆ. ಇದರಿಂದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ. ಹುಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗಾಯಾಳುಗಳ ಪೈಕಿ ವಯೋವೃದ್ಧೆಯ ಆರೋಗ್ಯದ ಸ್ಥಿತಿ ಗಂಭೀರವಾಗಿದೆ. ಅವರಿಗೆ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲು ಈಗಾಗಲೇ ವ್ಯವಸ್ಥೆ ಮಾಡಲಾಗುತ್ತಿದೆ. ಎನ್ ಡಿ‌ಆರ್ ಎಫ್ ನಾರ್ಮ್ ಪ್ರಕಾರ ಮೃತರ ಕುಟುಂಬಗಳಿಗೆ ತ್ವರಿತವಾಗಿ ಪರಿಹಾರ ನೀಡಲಾಗುವುದು.

ಘಟನಾ ಸ್ಥಳಕ್ಕೆ ಆಂಬ್ಯುಲೆನ್ಸ್ ತಡವಾಗಿ ಬಂದಿದೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ತರಿಸಿಕೊಂಡು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ದಾನಮ್ಮನವರ ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ