ಪರ್ವತ ಪ್ರವಾಹ: ಕೇರಳಕ್ಕೆ ಎಲ್ಲ ರೀತಿಯ ನೆರವು ನೀಡುತ್ತೇವೆ: ಸಿಎಂ ಸಿದ್ದರಾಮಯ್ಯ ಘೋಷಣೆ - Mahanayaka

ಪರ್ವತ ಪ್ರವಾಹ: ಕೇರಳಕ್ಕೆ ಎಲ್ಲ ರೀತಿಯ ನೆರವು ನೀಡುತ್ತೇವೆ: ಸಿಎಂ ಸಿದ್ದರಾಮಯ್ಯ ಘೋಷಣೆ

c.m siddaramaya
30/07/2024


Provided by

ಕೇರಳದ ವಯನಾಡ್ ನಲ್ಲಿ ಗುಡ್ಡ ಕುಸಿತದ ಪರಿಣಾಮ 80ಕ್ಕೂ ಅಧಿಕ ಜನರು ಬಲಿಯಾಗಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯನವರು ಕೇರಳಕ್ಕೆ ಎಲ್ಲ ರೀತಿಯ ನೆರವು ನೀಡಲು ಸರ್ಕಾರ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ವಯನಾಡ್ ನಲ್ಲಿ ನಡೆದ ಭೀಕರ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಕೇರಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ