ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದು ಭೂಕುಸಿತಕ್ಕೆ ಕಾರಣ: ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ - Mahanayaka

ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದು ಭೂಕುಸಿತಕ್ಕೆ ಕಾರಣ: ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

siddaramaiah
03/08/2024


Provided by

ಹಾಸನ: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತಗೊಂಡ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಭೇಟಿ ನೀಡಿದರು. ಇದೇ ವೇಳೆ ಅವೈಜ್ಞಾನಿಕ ಕಾಮಗಾರಿಯ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದರು.

ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದನ್ನು ಪ್ರಶ್ನಿಸಿದ ಅವರು, ಗುಡ್ಡ ಕುಸಿತಕ್ಕೆ ಇದುವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂ ಸ್ವಾಧೀನಗೊಳಿಸಿಕೊಳ್ಳುವುದು. ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಿದ್ದೀರಿ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ..? ಗುಡ್ಡಗಳನ್ನು 30-45 ಅಡಿ ಕತ್ತರಿಸಿ ತಡೆಗೋಡೆಗಳನ್ನು ನಿರ್ಮಿಸಿದ್ದರೆ ಗುಡ್ಡ ಕುಸಿತ ತಡೆಯಬಹುದಿತ್ತಲ್ಲವೇ ಎಂದು ರಾಷ್ಟ್ರೀಯ ಹೆದ್ದಾರಿ‌ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್  ಅವರನ್ನು ಸಿಎಂ ತರಾಟೆಗೆತ್ತಿಕೊಂಡರು.

ಇನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿವರಣೆ ನೀಡಿದ್ದು, ಒಟ್ಟು 45 ಕಿಲೋ ಮೀಟರ್ ನಲ್ಲಿ 35 ಕಿಲೋ ಮೀಟರ್ ಹೈವೇ ಕಾಮಗಾರಿ ಮುಗಿದಿದೆ. ಇನ್ನು 10 ಕಿಲೋ ಮೀಟರ್ ಮಾತ್ರ ಬಾಕಿ ಇದೆ. ಆದರೆ ಎಲ್ಲಿಯೂ ತಡೆಗೋಡೆ ನಿರ್ಮಿಸಿಲ್ಲ. ಮಣ್ಣಿನ ಗುಣಮಟ್ಟ ಪರೀಕ್ಷಿಸಿ, ಅದರ ಆಧಾರದ‌ ಮೇಲೆ‌ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಂತೆ ಕಾಣಿಸುತ್ತಿಲ್ಲ ಎಂದು ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ