ಭೀಮಾ ನದಿಗೆ 1,20,000 ಕ್ಯೂಸೆಕ್ ನೀರು: ಭೀಮಾ ನದಿ ಪಾತ್ರದಲ್ಲಿ ಪ್ರವಾಹದ ಭೀತಿ

ವಿಜಯಪುರ: ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಉಜನಿ ಹಾಗೂ ವೀರ್ ಜಲಾಶಯಗಳಿಂದ ಭೀಮಾನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದ್ದು, ಇದರಿಂದಾಗಿ ಪ್ರವಾಹ ಭೀತಿ ಸೃಷ್ಟಿಯಾಗಿದೆ.
1,20,000 ಕ್ಯೂಸೆಕ್ ನೀರು ಭೀಮಾ ನದಿಗೆ ಹರಿಸಲಾಗಿದೆ. ಇದರಿಂದಾಗಿ ವಿಜಯಪುರ ಜಿಲ್ಲೆಯಲ್ಲಿ ಭೀಮಾ ನದಿ ಉಕ್ಕಿ ಹರಿಯುತ್ತಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಚಡಚಣ ತಾಲೂಕಿನಲ್ಲಿ ಭೀಮಾನದಿಗೆ ಅಡ್ಡಲಾಗಿ ಕಟ್ಟಿರುವ ಉಮರಾಣಿ– ಲವಗಿ ಬ್ಯಾರೇಜ್ ಮುಳುಗಡೆಯಾಗಿದೆ. ಭಾರೀ ನೀರಿನ ಹರಿವಿನಿಂದಾಗಿ ಭೀಮಾ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.
ಭೀಮಾ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಚಡಚಣ, ಇಂಡಿ, ಆಲಮೇಲ, ಸಿಂದಗಿ ತಾಲೂಕುಗಳಲ್ಲಿ ಪ್ರವಾಹದ ಭೀತಿ ಸೃಷ್ಟಿಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth