ಡಾಕ್ಟರೇಟ್ ಪದವಿ ಪಡೆಯಲು ನಿರಾಕರಿಸಿದ ಚಿತ್ರನಟ ಸುದೀಪ್ - Mahanayaka
9:40 PM Wednesday 15 - October 2025

ಡಾಕ್ಟರೇಟ್ ಪದವಿ ಪಡೆಯಲು ನಿರಾಕರಿಸಿದ ಚಿತ್ರನಟ ಸುದೀಪ್

sudeep 1
06/08/2024

ಈ ಬಾರಿಯ ತುಮಕೂರು ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವದಲ್ಲಿ ಚಿತ್ರನಟ ಸುದೀಪ್ ಅವರಿಗೆ ಡಾಕ್ಟರೇಟ್ ನೀಡಲು ನಿರ್ಣಯ ಕೈಗೊಳ್ಳಲಾಗಿತ್ತು ಆದರೆ ಅದನ್ನು ಅವರು ನಯವಾಗಿ ತಿರಸ್ಕಾರ ಮಾಡಿದ್ದಾರೆ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದ್ದಾರೆ.


Provided by

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ವಿವಿಧ ಹಂತದಲ್ಲಿ ಅವರನ್ನು ಸಂಪರ್ಕಿಸಲು ಯತ್ನಿಸಲಾಗಿತ್ತು, ಅಂತಿಮವಾಗಿ ಅವರ ಆಪ್ತ ಸಹಾಯಕರ ಮೂಲಕ ಅವರನ್ನು ಪ್ರಸ್ತಾಪ ಮಾಡಲಾಯಿತು ಡಾಕ್ಟರೇಟ್ ಪದವಿ ಪಡೆಯುವ ನಿರ್ಧಾರ ತಿಳಿಸಲು ಎರಡು ದಿನಗಳ ಕಾಲಾವಕಾಶ ಕೇಳಿದ್ದರು. ಆನಂತರ ಅವರು ತಮ್ಮ ಆಪ್ತ ಸಹಾಯಕನ ಮೂಲಕವೇ ನನಗಿಂತ ಅನೇಕ ಮಂದಿ ಹೆಚ್ಚು ಸಾಧನೆ ಮಾಡಿದವರು ಇದ್ದಾರೆ ಅವರನ್ನು ಪರಿಗಣಿಸಿ, ಅಲ್ಲದೆ ತುಮಕೂರು ವಿಶ್ವವಿದ್ಯಾಲಯದ ರೀತಿಯ ನಿರ್ಧಾರಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಮೂಲಕವೂ ಕೂಡ ಸುದೀಪ್ ಅವರನ್ನು ಸಂಪರ್ಕಿಸಿದಾಗಲೂ, ಸುದೀಪ ಅವರು ಡಾಕ್ಟರೇಟ್ ಪದವಿ ಪಡೆಯಲು ನಿರಾಕರಿಸಿದ್ದಾರೆ ಎಂದು ವಿವರಿಸಿದರು.

ಸುದೀಪ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಡಾಕ್ಟರ್ ಪದವಿ ನೀಡಲು ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ