ದೇವಸ್ಥಾನದೊಳಗೆ ಆತ್ಮಹತ್ಯೆ ಮಾಡಿಕೊಂಡ ಯುವಕ! - Mahanayaka
4:54 PM Saturday 25 - October 2025

ದೇವಸ್ಥಾನದೊಳಗೆ ಆತ್ಮಹತ್ಯೆ ಮಾಡಿಕೊಂಡ ಯುವಕ!

07/03/2021

ಕೋಟಾ: ದೇವಸ್ಥಾನದೊಳಗೆ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು, ಖಿನ್ನತೆಯಿಂದ ಬಳಲುತ್ತಿದ್ದ ಯುವಕ ದೇವಸ್ಥಾನದಲ್ಲಿಯೇ ನೇಣಿಗೆ ಶರಣಾಗಿದ್ದಾನೆ.

ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ 35 ವರ್ಷದ ಚಂದ್ರಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.  ಇವರು ಆತ್ಮಹತ್ಯೆ ಮಾಡಿಕೊಂಡಿರುವ ದೇವಸ್ಥಾನದ ಕೆಲಸ ಕಾರ್ಯಗಳಿಗೆ ನೆರವಾಗುತ್ತಿದ್ದ ಅವರು ಅಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ಚಂದ್ರ ಪೂಜಾರಿ ಸೆಂಟ್ರಿಂಗ್  ಕೆಲಸಗಳನ್ನು ಮಾಡುತ್ತಿದ್ದರು. ಎರಡು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ಪ್ರತೀ ದಿನ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗೆ ದೇವಸ್ಥಾನಕ್ಕೆ ಕಸ ಗುಡಿಸಲು ಬಂದ ಇಲ್ಲಿನ ಕೆಲಸಗಾರರು ಚಂದ್ರ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿ ಸ್ಥಳೀಯರಿಗೆ ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ.

ಇತ್ತೀಚಿನ ಸುದ್ದಿ