ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆಯೇ ಕಾಂಗ್ರೆಸ್ ಮುಖಂಡ ಹೃದಯಾಘಾತಕ್ಕೆ ಬಲಿ! - Mahanayaka
10:17 PM Wednesday 7 - January 2026

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆಯೇ ಕಾಂಗ್ರೆಸ್ ಮುಖಂಡ ಹೃದಯಾಘಾತಕ್ಕೆ ಬಲಿ!

death
19/08/2024

ಬೆಂಗಳೂರು: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಡೆಯುತ್ತಿದ್ದ ಸುದ್ದಿಗೋಷ್ಠಿ ವೇಳೆ ಕಾಂಗ್ರೆಸ್ ಮುಖಂಡರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಸಂಘದ ಮುಖಂಡ ರವಿಚಂದ್ರನ್ ಮೃತಪಟ್ಟವರಾಗಿದ್ದಾರೆ.

ಇಂದು ಮಧ್ಯಾಹ್ನದ ವೇಳೆ ಸುದ್ದಿಗೋಷ್ಠಿ ಕರೆಯಲಾಗಿತ್ತು. ಸುದ್ದಿಗೋಷ್ಠಿಯನ್ನುದ್ದೇಶಿಸಿ ರವಿಚಂದ್ರನ್ ಮಾತನಾಡುತ್ತಿದ್ದರು. ಈ ವೇಳೆ ಏಕಾಏಕಿ ಅವರು ಎದೆನೋವು ಕಾಣಿಸಿಕೊಂಡು ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ.

ತಕ್ಷಣವೇ ಅವರನ್ನು ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಣೆ ಮಾಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ