ವೈದ್ಯೆಯ ಅತ್ಯಾಚಾರ-ಕೊಲೆ ಕೇಸ್: ಉನ್ನತ ಪೊಲೀಸ್ ಅಧಿಕಾರಿಯ ಬೈಕನ್ನು ಬಳಸಿದ್ದ ಆರೋಪಿ..!

ಕೊಲ್ಕತ್ತಾ ವೈದ್ಯೆಯನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಆರೋಪಿ ಆ ದಿನ ಉನ್ನತ ಪೊಲೀಸ್ ಅಧಿಕಾರಿಯ ಬೈಕನ್ನು ಬಳಸಿದ್ದ ಅನ್ನುವುದು ಬಹಿರಂಗವಾಗಿದೆ. ಕೊಲ್ಕತ್ತಾ ಪೊಲೀಸ್ ಇಲಾಖೆಯಲ್ಲಿ ಸ್ವಯಂಸೇವಕನಾಗಿ ದುಡಿಯುತ್ತಿದ್ದ ಸಂಜೆಯ್ ರಾಯ್ ಆ ದಿನ ಪೊಲೀಸಧಿಕಾರಿಯ ಬೈಕನ್ನು ಬಳಸಿ ಹದಿನೈದು ಕಿಲೋಮೀಟರ್ ದೂರದ ರೆಡ್ ಲೈಟ್ ಏರಿಯಾಕ್ಕೆ ಹೋಗಿದ್ದ ಅನ್ನುವುದು ಗೊತ್ತಾಗಿದೆ.
ಇದೀಗ ಈ ಬೈಕನ್ನು ಸಿಬಿಐ ವಶಪಡಿಸಿಕೊಂಡಿದೆ. ಸಂಜಯ್ ತನ್ನನ್ನು ಪೋಲಿಸ್ ಎಂದು ಹೇಳಿಕೊಂಡು ಎಲ್ಲರನ್ನೂ ಬೆದರಿಸುತ್ತಿದ್ದ.
ಈ ಕಾರ್ ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ನೋಂದಣಿಯಾಗಿದೆ. ಆಗಸ್ಟ್ ಒಂಬತ್ತರ ಘಟನೆಯ ನಂತರ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಕೊಲ್ಕತ್ತಾ ಪೊಲೀಸರು ಈತನನ್ನು ಬಂಧಿಸಿದ್ದರು. ಆರ್ ಜೆ ಕಾರ್ ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಮಹಿಳಾ ವೈದ್ಯಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿದ ಆರೋಪ ಈತನ ಮೇಲಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth