ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಬಂಧನ: ಪೊಲೀಸರಿಂದ ಲಾಠಿಚಾರ್ಜ್ - Mahanayaka
10:26 AM Tuesday 14 - October 2025

ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಬಂಧನ: ಪೊಲೀಸರಿಂದ ಲಾಠಿಚಾರ್ಜ್

09/09/2024

ಸೋಮವಾರ ಮುಂಜಾನೆ ಕೆಲವು ಅಪ್ರಾಪ್ತ ವಯಸ್ಕರು ಗಣೇಶ ಪೆಂಡಾಲ್ ಮೇಲೆ ಕಲ್ಲು ಎಸೆದ ನಂತರ ಗುಜರಾತ್ ನ ಸೂರತ್ ಜಿಲ್ಲೆಯಲ್ಲಿ ಉದ್ವಿಗ್ನತೆ ಉಂಟಾಗಿದೆ.
ನಗರದ ಸಯ್ಯದ್ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸಾವಿರಾರು ಸ್ಥಳೀಯರು ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.


Provided by

ಇನ್ನು ಈ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಭಾರೀ ಪೊಲೀಸ್ ಪಡೆ ಸ್ಥಳಕ್ಕೆ ತಲುಪಿದೆ. ಕೋಪಗೊಂಡ ಜನಸಮೂಹವನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಪ್ರಯೋಗಿಸಿದರು.

ಈ ಕುರಿತು ಸುದ್ದಿ ಸಂಸ್ಥೆ ಎಎನ್ಐ ಜೊತೆ ಮಾತನಾಡಿದ ಸೂರತ್ ಪೊಲೀಸ್ ಆಯುಕ್ತ ಅನುಪಮ್ ಗೆಹ್ಲೋಟ್, “ಕೆಲವು ಮಕ್ಕಳು ಗಣೇಶ ಪಂಡಲ್ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಘರ್ಷಣೆ ನಡೆದಿದೆ. ಪೊಲೀಸರು ತಕ್ಷಣವೇ ಆ ಮಕ್ಕಳನ್ನು ಅಲ್ಲಿಂದ ಕರೆದೊಯ್ದಿದ್ದಾರು. ತಕ್ಷಣ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಯಿತು. ಅಗತ್ಯವಿದ್ದ ಎಲ್ಲ ಪ್ರದೇಶಗಳಲ್ಲಿ ಲಾಠಿ ಚಾರ್ಜ್ ಮಾಡಿ, ಅಶ್ರುವಾಯು ಪ್ರಯೋಗಿಸಲಾಯಿತು. ಶಾಂತಿ ಭಂಗದಲ್ಲಿ ಭಾಗಿಯಾಗಿದ್ದ ಎಲ್ಲ ಆರೋಪಿಗಳನ್ನೂ ಬಂಧಿಸಲಾಗುತ್ತಿದೆ. ಸುತ್ತಲೂ ಸುಮಾರು 1,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ” ಎಂದಿದ್ದಾರೆ.

ಇಂದು ಮುಂಜಾನೆ 2.30 ರ ಸುಮಾರಿಗೆ ಗುಜರಾತ್ ಗೃಹ ಸಚಿವ ಹರ್ಷ್ ಸಂಘವಿ ಮತ್ತು ಸ್ಥಳೀಯ ಬಿಜೆಪಿ ಶಾಸಕ ಕಾಂತಿ ಬಲಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಸ್ಥಳೀಯರೊಂದಿಗೆ ಮಾತನಾಡಿದರು.

ಸಚಿವ ಸಂಘವಿಯ ಪ್ರಕಾರ, ಗಣೇಶ ಮಂಟಪದ ಮೇಲೆ ಕಲ್ಲು ಎಸೆದ ಆರೋಪದ ಮೇಲೆ ಆರು ಅಪ್ರಾಪ್ತ ವಯಸ್ಕರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಕಲ್ಲು ತೂರಾಟಕ್ಕೆ ಪ್ರೋತ್ಸಾಹಿಸಿದ ಇತರ 27 ಜನರನ್ನು ಪೊಲೀಸರು ಬಂಧಿಸಿದರು.

ಪೊಲೀಸ್ ಕ್ರಮದ ಬಗ್ಗೆ ವಿವರಗಳನ್ನು ಹಂಚಿಕೊಂಡ ಸಂಘವಿ, ಇತರ ಆರೋಪಿಗಳನ್ನು ಬಂಧಿಸಲು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ ಎಂದು ಹೇಳಿದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ