ಸಮಾಜವಾದಿ ಪಕ್ಷದ ಶಾಸಕನ ಮನೆಯಲ್ಲಿ ಮನೆಕೆಲಸದಾಳು ಶವವಾಗಿ ಪತ್ತೆ - Mahanayaka
3:59 PM Wednesday 15 - October 2025

ಸಮಾಜವಾದಿ ಪಕ್ಷದ ಶಾಸಕನ ಮನೆಯಲ್ಲಿ ಮನೆಕೆಲಸದಾಳು ಶವವಾಗಿ ಪತ್ತೆ

10/09/2024

ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಸಮಾಜವಾದಿ ಪಕ್ಷದ ಶಾಸಕರ ನಿವಾಸದಲ್ಲಿ ಮನೆಕೆಲಸದವಳಾಗಿ ಕೆಲಸ ಮಾಡುತ್ತಿದ್ದ 17 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಇದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಶಂಕಿಸಿದ್ದಾರೆ.
ಪೊಲೀಸರ ಪ್ರಕಾರ, ಸೋಮವಾರ ಶಾಸಕ ಜಾಹಿದ್ ಬೇಗ್ ಅವರ ಮನೆಯ ಟೆರೇಸ್‌ನಲ್ಲಿರುವ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.


Provided by

ಇನ್ನು ಈ ಘಟನೆಯನ್ನು ದೃಢೀಕರಿಸಿದ ಭದೋಹಿ ಪೊಲೀಸ್ ವರಿಷ್ಠಾಧಿಕಾರಿ ಮೀನಾಕ್ಷಿ ಕತ್ಯಾಯನ್, ಬಾಲಕಿಯು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾಳೆ. ಈ ಕುರಿತು ಮಾಹಿತಿ ಪಡೆದ ತಕ್ಷಣ, ವಿಧಿವಿಜ್ಞಾನ ತಂಡ ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ ಎಂದು ಹೇಳಿದರು.
“ಶವವನ್ನು ವಶಪಡಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಈ‌ ಕುರಿತು ತನಿಖೆ ನಡೆಯುತ್ತಿದೆ “ಎಂದು ಕತ್ಯಾಯನ್ ಹೇಳಿದರು.

ಭಾನುವಾರ ರಾತ್ರಿ ಊಟ ಮಾಡಿದ ನಂತರ ಆಕೆ ಮಲಗಲು ಹೋಗಿದ್ದಳು ಎಂದು ಸಂತ್ರಸ್ತೆಯ ಕುಟುಂಬ ಹೇಳಿದೆ. ಆಕೆ ಕಳೆದ ಆರು ವರ್ಷಗಳಿಂದ ಶಾಸಕರ ನಿವಾಸದಲ್ಲಿ ಕೆಲಸ ಮಾಡುತ್ತಿದ್ದಳು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ