ಸಿಪಿಎಂ ನಾಯಕ ಸೀತಾರಾಂ ಯೆಚೂರಿ ಇನ್ನಿಲ್ಲ - Mahanayaka
12:40 PM Thursday 21 - August 2025

ಸಿಪಿಎಂ ನಾಯಕ ಸೀತಾರಾಂ ಯೆಚೂರಿ ಇನ್ನಿಲ್ಲ

sitaram yechury
12/09/2024


Provided by

ನವದೆಹಲಿ: ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸೀತಾರಾಂ ಯೆಚೂರಿ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಸೀತಾರಾಂ ಯೆಚೂರಿ ಅವರಿಗೆ 72 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅವರು ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದರು. ಕೆಲವು ದಿನಗಳಿಂದ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆಯನ್ನು ವೈದ್ಯರು ಮಾಡಿದ್ದರು.

ವೈದ್ಯರ ಸತತ ಪ್ರಯತ್ನಗಳ ನಂತರವೂ ಸೀತಾರಾಂ ಯೆಚೂರಿ ಅವರ ಆರೋಗ್ಯ ಚೇರಿಸಿಕೊಂಡಿಲ್ಲ, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಅವರು ಕೊನೆಯುಸಿರೆಳೆದಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ