ವೈದ್ಯರ ಮುಷ್ಕರದಿಂದಾಗಿ 29 ಮಂದಿ ಸಾವನ್ನಪ್ಪಿದ್ದಾರೆ: ಮಮತಾ ಬ್ಯಾನರ್ಜಿ ಹೇಳಿಕೆ - Mahanayaka
6:58 PM Saturday 18 - October 2025

ವೈದ್ಯರ ಮುಷ್ಕರದಿಂದಾಗಿ 29 ಮಂದಿ ಸಾವನ್ನಪ್ಪಿದ್ದಾರೆ: ಮಮತಾ ಬ್ಯಾನರ್ಜಿ ಹೇಳಿಕೆ

13/09/2024

ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ಪ್ರತಿಭಟನೆಯಿಂದಾಗಿ ರಾಜ್ಯದಲ್ಲಿ ಆರೋಗ್ಯ ಸೇವೆಗಳ ಅಡಚಣೆಯಿಂದಾಗಿ 29 ಜನರು ಸಾವನ್ನಪ್ಪಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಹೇಳಿದ್ದಾರೆ.


Provided by

ವೈದ್ಯಕೀಯ ಸೇವೆಗಳ ಅಡೆತಡೆಯಿಂದಾಗಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.
ಪ್ರತಿಭಟನಾ ನಿರತ ವೈದ್ಯರೊಂದಿಗೆ ಮಾತುಕತೆ ನಡೆಸಲು ತಮ್ಮ ಸರ್ಕಾರ ಬದ್ಧವಾಗಿದೆ ಮತ್ತು ನ್ಯಾಯಕ್ಕಾಗಿ “ತಮ್ಮ ಕುರ್ಚಿಯನ್ನು ತ್ಯಜಿಸಲು ಸಿದ್ಧ” ಎಂದು ಮುಖ್ಯಮಂತ್ರಿ ಈ ಹಿಂದೆ ಹೇಳಿದ್ದರು. ಸೆಪ್ಟೆಂಬರ್ ೧೦ ರ ಸಂಜೆಯೊಳಗೆ ಕೆಲಸಕ್ಕೆ ಮರಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದರೂ ಕಿರಿಯ ವೈದ್ಯರು ತಮ್ಮ ಮುಷ್ಕರವನ್ನು ಮುಂದುವರಿಸಿದ್ದಾರೆ.

ಪಶ್ಚಿಮ ಬಂಗಾಳ ಸರ್ಕಾರ ಗುರುವಾರ ಮೂರನೇ ಬಾರಿಗೆ ವೈದ್ಯರಿಗೆ ಪತ್ರ ಬರೆದು ಆರ್ಜಿ ಕಾರ್ ಬಿಕ್ಕಟ್ಟನ್ನು ಪರಿಹರಿಸಲು ಅವರೊಂದಿಗೆ ಸಭೆ ನಡೆಸುವಂತೆ ಕೋರಿತ್ತು.
ಕಿರಿಯ ವೈದ್ಯರು ರಾಜ್ಯ ಸಚಿವಾಲಯ ‘ನಬನ್ನಾ’ಕ್ಕೆ ಹೋಗಿದ್ದರು. ಆದರೆ ಮಾತುಕತೆಯನ್ನು ನೇರ ಪ್ರಸಾರ ಮಾಡಲು ರಾಜ್ಯ ಸರ್ಕಾರ ಒಪ್ಪದ ಕಾರಣ ಸಭೆ ನಡೆಯಲಿಲ್ಲ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ