ಆಯ್ಕೆ: ಆರ್ ಬಿಐ ನೂತನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅವಿರಳ್ ಜೈನ್ ನೇಮಕ - Mahanayaka
10:07 PM Tuesday 9 - September 2025

ಆಯ್ಕೆ: ಆರ್ ಬಿಐ ನೂತನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅವಿರಳ್ ಜೈನ್ ನೇಮಕ

05/10/2024

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿಐ) ಅವಿರಳ್ ಜೈನ್ ಅವರನ್ನು ಕಾರ್ಯನಿರ್ವಾಹಕ ನಿರ್ದೇಶಕರಾಗಿ (ಇಡಿ) ನೇಮಕ ಮಾಡಿದೆ. ಇದು ಅಕ್ಟೋಬರ್ 1, 2024 ರಿಂದ ಜಾರಿಗೆ ಬರಲಿದೆ. ಈ ಬಡ್ತಿಗೆ ಮೊದಲು, ಜೈನ್ ಮಹಾರಾಷ್ಟ್ರದ ಪ್ರಾದೇಶಿಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಮೇಲ್ವಿಚಾರಣೆ, ಕರೆನ್ಸಿ ನಿರ್ವಹಣೆ, ವಿದೇಶಿ ವಿನಿಮಯ ನಿಯಂತ್ರಣ ಮತ್ತು ಮಾನವ ಸಂಪನ್ಮೂಲ ನಿರ್ವಹಣೆ ಸೇರಿದಂತೆ ವಿವಿಧ ಪ್ರಮುಖ ಕ್ಷೇತ್ರಗಳಲ್ಲಿ 30 ವರ್ಷಗಳ ಅನುಭವ ಇವರಿಗೆ ಇದೆ.


Provided by

ಅವಿರಾಲ್ ಜೈನ್ ಅವರು ಮೇಲ್ವಿಚಾರಣೆ, ಕರೆನ್ಸಿ ನಿರ್ವಹಣೆ, ವಿದೇಶಿ ವಿನಿಮಯ ನಿಯಂತ್ರಣ ಮತ್ತು ಮಾನವ ಸಂಪನ್ಮೂಲ ನಿರ್ವಹಣೆಯಲ್ಲಿ ಮೂರು ದಶಕಗಳ ಅನುಭವವನ್ನು ಹೊಂದಿದ್ದಾರೆ.
ಇವರು ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮಾಡಿದ್ದಾರೆ‌.

ಕಾರ್ಯನಿರ್ವಾಹಕ ನಿರ್ದೇಶಕರಾಗಿ, ಜೈನ್ ಕಾನೂನು ಇಲಾಖೆ, ಮತ್ತು ಮಾಹಿತಿ ಹಕ್ಕು ಕಾಯ್ದೆ (ಮೊದಲ ಮೇಲ್ಮನವಿ ಪ್ರಾಧಿಕಾರವಾಗಿ) ಮೇಲ್ವಿಚಾರಣೆ ನಡೆಸಲಿದ್ದಾರೆ. ಅವರು ಐಐಬಿಎಫ್ ನ ಪ್ರಮಾಣೀಕೃತ ಅಸೋಸಿಯೇಟ್ ಕೂಡ ಆಗಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ