ಮೈಸೂರು-ದರ್ಭಾಂಗ ಎಕ್ಸ್ ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ: 19 ಮಂದಿಗೆ ಗಾಯ - Mahanayaka
8:43 PM Wednesday 20 - August 2025

ಮೈಸೂರು-ದರ್ಭಾಂಗ ಎಕ್ಸ್ ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ: 19 ಮಂದಿಗೆ ಗಾಯ

12/10/2024


Provided by

ಮೈಸೂರು-ದರ್ಭಾಂಗ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 19 ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಮಿಳುನಾಡಿನ ಚೆನ್ನೈ ಬಳಿಯ ಕವರೈಪೆಟ್ಟೈ ರೈಲ್ವೆ ನಿಲ್ದಾಣದಲ್ಲಿ ರಾತ್ರಿ ನಡೆದಿದೆ. ಪರಿಹಾರ ಮತ್ತು ರಕ್ಷಣಾ ಪ್ರಯತ್ನಗಳು ನಡೆಯುತ್ತಿವೆ. ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ರೈಲ್ವೆಯ ಚೆನ್ನೈ ವಿಭಾಗದ ಪೊನ್ನೇರಿ ಮತ್ತು ಕವರೈಪೆಟ್ಟೈ ರೈಲ್ವೆ ನಿಲ್ದಾಣಗಳ ನಡುವಿನ ಚೆನ್ನೈ-ಗುಡೂರ್ ವಿಭಾಗದಲ್ಲಿ ರಾತ್ರಿ 8: 30 ರ ಸುಮಾರಿಗೆ ಈ ಘಟನೆ ನಡೆದಿದೆ. ಡಿಕ್ಕಿಯಿಂದಾಗಿ ಪ್ಯಾಸೆಂಜರ್ ರೈಲಿನಿಂದ 12 ಬೋಗಿಗಳು ಹಳಿ ತಪ್ಪಿವೆ.

ಮೈಸೂರು-ದರ್ಭಾಂಗ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದ ಘಟನೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಚೆನ್ನೈನ ಸರ್ಕಾರಿ ಸ್ಟಾನ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ