ನಟ ದರ್ಶನ್ ಜಾಮೀನು ಅರ್ಜಿ ವಜಾ: ಅಭಿಮಾನಿಗಳಿಗೆ ನಿರಾಸೆ - Mahanayaka
7:03 PM Wednesday 15 - October 2025

ನಟ ದರ್ಶನ್ ಜಾಮೀನು ಅರ್ಜಿ ವಜಾ: ಅಭಿಮಾನಿಗಳಿಗೆ ನಿರಾಸೆ

darshan
14/10/2024

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್  ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು ಪೂರ್ಣಗೊಂಡಿದ್ದು, ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್ ದರ್ಶನ್ ಗೆ ಜಾಮೀನು ನೀಡಲು ನಿರಾಕರಿಸಿದೆ.


Provided by

ದರ್ಶನ್ ಪರ ಸಿ.ವಿ.ನಾಗೇಶ್ ಅವರು ವಾದ ಮಂಡನೆ ಮಾಡಿದರು. ದರ್ಶನ್ ವಿರುದ್ಧ ಸಾಕ್ಷಿ ಇಲ್ಲ, ಸಾಕ್ಷಿಗಳನ್ನ ಸೃಷ್ಟಿ ಮಾಡಲಾಗಿದೆ ಎನ್ನುವುದು ಅವರ ವಾದವಾಗಿತ್ತು. ಈ ವಾದಕ್ಕೆ ಸರ್ಕಾರಿ ವಕೀಲ ಪ್ರಸನ್ನ ಕುಮಾರ್ ಅವರು ಸರಿಯಾದ ಕೌಂಟರ್ ವಾದ ಮಾಡಿದ್ದರು. ಹೀಗಾಗಿ ಕೋರ್ಟ್ ಗೆ ಪ್ರಸನ್ನ ಕುಮಾರ್ ಅವರ ವಾದ ಹೆಚ್ಚು ಸಮಂಜಸವಾಗಿದೆ ಎನ್ನುವುದು ಮನವರಿಕೆಯಾದ ಹಿನ್ನೆಲೆ ಜಾಮೀನು ಅರ್ಜಿ ನಿರಾಕರಿಸಲಾಗಿದೆ.

ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಜಾಗೊಂಡಿರುವ ಕಾರಣ ದರ್ಶನ್ ಇನ್ನಷ್ಟು ದಿನಗಳ ಕಾಲ ಬಳ್ಳಾರಿ ಜೈಲಿನಲ್ಲೇ ಕಾಲಕಳೆಯಬೇಕಿದೆ. ಇನ್ನೊಂದೆಡೆ ದರ್ಶನ್ ಗೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆ  ಅನಾರೋಗ್ಯದ ಕಾರಣದಿಂದ ಬೆಂಗಳೂರಿಗೆ ಶಿಫ್ಟ್ ಮಾಡುವ ಸಾಧ್ಯತೆಗಳಿವೆ ಎಂದೂ ಹೇಳಲಾಗುತ್ತಿದೆ.

ಕಾನೂನಿನಲ್ಲಿ ನಟ ದರ್ಶನ್ ಅವರಿಗೆ ಹೈಕೋರ್ಟ್ ಗೆ ಹೋಗುವ  ಅವಕಾಶ ಕೂಡ ಇದೆ. ದರ್ಶನ್ ಪರ ವಕೀಲರು ಜಾಮೀನು ಪಡೆದುಕೊಳ್ಳಲು ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದರು ಆದರೆ, ಸಾಧ್ಯವಾಗಿಲ್ಲ.  ಇಂದು ದರ್ಶನ್ ಗೆ ಜಾಮೀನು ಸಿಗಬಹುದು ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಜಾಮೀನು ಸಿಕ್ಕಿಲ್ಲ ಹೀಗಾಗಿ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ