ಪೈಶಾಚಿಕ: ದೇವಸ್ಥಾನದಲ್ಲಿ ಪತಿಯೊಂದಿಗೆ ಇದ್ದ ನವವಿವಾಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರ - Mahanayaka
9:06 AM Wednesday 20 - August 2025

ಪೈಶಾಚಿಕ: ದೇವಸ್ಥಾನದಲ್ಲಿ ಪತಿಯೊಂದಿಗೆ ಇದ್ದ ನವವಿವಾಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರ

25/10/2024


Provided by

ದೇವಸ್ಥಾನದಲ್ಲಿ ಪತಿಯೊಂದಿಗೆ ವಿಹಾರಕ್ಕೆ ಹೋಗುತ್ತಿದ್ದ ನವವಿವಾಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ ಮಧ್ಯಪ್ರದೇಶದ ರೇವಾ ಜಿಲ್ಲೆಯ ಗುರ್ಹ್ ಪ್ರದೇಶದ ಭೈರವ್ ಬಾಬಾ ದೇವಸ್ಥಾನದಲ್ಲಿ ನಡೆದಿದೆ. ಪೊಲೀಸರು ಈವರೆಗೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆ ಅಕ್ಟೋಬರ್ 21 ರಂದು ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಡಿದ ಅಮಲಿನಲ್ಲಿ 7-8 ಮಂದಿ ದುಷ್ಕರ್ಮಿಗಳು ನವವಿವಾಹಿತ ದಂಪತಿಯನ್ನು ಹಿಡಿದಿಟ್ಟು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಇದೇ ವೇಳೆ ಆರೋಪಿಗಳು ಮಹಿಳೆಯ ಖಾಸಗಿ ವೀಡಿಯೊವನ್ನು ಚಿತ್ರೀಕರಿಸಿದ್ದು, ಘಟನೆಯನ್ನು ಪೊಲೀಸರಿಗೆ ತಿಳಿಸಿದರೆ ಅದನ್ನು ಸಾರ್ವಜನಿಕಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿಗಳ ಬೆದರಿಕೆಯಿಂದ ಹೆದರಿದ ದಂಪತಿ ಒಂದು ದಿನ ಮೌನವಾಗಿದ್ದರು. ಆದರೆ ನಂತರ ಮರುದಿನ ಗುರ್ಹ್ ಪೊಲೀಸ್ ಠಾಣೆಗೆ ತೆರಳಿ ಈ ಭಯಾನಕ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.

ಪತಿಯನ್ನು ಕೆಲವು ಪುರುಷರು ಹಿಡಿದಿಟ್ಟಿದ್ದರು. ಆದರೆ ಯಾವುದೇ ಮರಕ್ಕೆ ಕಟ್ಟಿ ಹಾಕಿಲ್ಲ ಎಂದು ದಂಪತಿಗಳ ಹೇಳಿಕೆಗಳು ಬಹಿರಂಗಪಡಿಸುತ್ತವೆ. ಆದರೆ ಅವರ ಹೆಂಡತಿಯನ್ನು ಐವರು ದುಷ್ಕರ್ಮಿಗಳು ಅಲ್ಲೆ ಹತ್ತಿರದ ಸ್ಥಳಕ್ಕೆ ಕರೆದುಕೊಂಡು ಹೋಗಿ, ನಂತರ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ