ಯಮುನಾ ನದಿಯಲ್ಲಿ ಸ್ನಾನ ಮಾಡಿದ ದೆಹಲಿ ಬಿಜೆಪಿ ಮುಖ್ಯಸ್ಥರಿಗೆ ಆರೋಗ್ಯ ಸಮಸ್ಯೆ: ಆಸ್ಪತ್ರೆಗೆ ದಾಖಲು - Mahanayaka
8:31 PM Wednesday 20 - August 2025

ಯಮುನಾ ನದಿಯಲ್ಲಿ ಸ್ನಾನ ಮಾಡಿದ ದೆಹಲಿ ಬಿಜೆಪಿ ಮುಖ್ಯಸ್ಥರಿಗೆ ಆರೋಗ್ಯ ಸಮಸ್ಯೆ: ಆಸ್ಪತ್ರೆಗೆ ದಾಖಲು

26/10/2024


Provided by

ನದಿಯನ್ನು ಸ್ವಚ್ಛಗೊಳಿಸುವಲ್ಲಿ ಎಎಪಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಯಮುನಾ ನದಿಯಲ್ಲಿ ಸ್ನಾನ ಮಾಡಿದ ಎರಡು ದಿನಗಳ ನಂತರ ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್ದೇವ್ ಅವರನ್ನು ತುರಿಕೆ ಮತ್ತು ಉಸಿರಾಟದ ತೊಂದರೆಯಿಂದಾಗಿ ಆರ್ಎಂಎಲ್ ನರ್ಸಿಂಗ್ ಹೋಂಗೆ ದಾಖಲಿಸಲಾಗಿದೆ.

ಗುರುವಾರ, ಸಚ್ದೇವ್ ಛತ್ ಘಾಟ್ ನಲ್ಲಿ ಯಮುನಾ‌ ನದಿಯಲ್ಲಿ ಸ್ನಾನ ಮಾಡಿದ್ದರು. 2025 ರ ವೇಳೆಗೆ ನದಿಯನ್ನು ಸ್ವಚ್ಛಗೊಳಿಸುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಸ್ನಾನ ಮಾಡಿದ ನಂತರ ಸಚ್ದೇವ್ ಚರ್ಮ‌ ಮತ್ತು ಉಸಿರಾಟದಲ್ಲಿ ಸಮಸ್ಯೆಗಳನ್ನು ಎದುರಿಸಿದರು. ಇದಕ್ಕಾಗಿ ಅವರನ್ನು ಆರ್ಎಂಎಲ್ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಅಲ್ಲಿ ವೈದ್ಯರು ಅವರಿಗೆ ಮೂರು ದಿನಗಳವರೆಗೆ ಔಷಧಿಗಳನ್ನು ಸೂಚಿಸಿದ್ದರು. ಈ‌ ಮಧ್ಯೆ ಶನಿವಾರ ಬೆಳಿಗ್ಗೆ ತುರಿಕೆ ಮತ್ತು ಉಸಿರಾಟದ ತೊಂದರೆಯ ಬಗ್ಗೆ ದೂರು ನೀಡಿದ ನಂತರ ಬಿಜೆಪಿ ನಾಯಕನನ್ನು ಆರ್ಎಂಎಲ್ ನರ್ಸಿಂಗ್ ಹೋಂಗೆ ದಾಖಲಿಸಲಾಯಿತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ