ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳ: ಮಹಾಯುತಿ ಸರ್ಕಾರದ ವಿರುದ್ಧ ಶರದ್ ಪವಾರ್ ವಾಗ್ದಾಳಿ
ಮಹಾರಾಷ್ಟ್ರ ಸರ್ಕಾರವು ಲಡ್ಕಿ ಬಹಿನ್ ಯೋಜನೆಯಂತಹ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆದರೆ ಮಹಿಳೆಯರ ವಿರುದ್ಧದ ಅಪರಾಧಗಳ ನಿರಂತರ ಏರಿಕೆಯ ಬಗ್ಗೆ ಏನೂ ಮಾಡುತ್ತಿಲ್ಲ ಎಂದು ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಕಿಡಿಕಾರಿದ್ದಾರೆ.
ತಮ್ಮ ಪಕ್ಷದ ಅಭ್ಯರ್ಥಿ ಪ್ರಶಾಂತ್ ಜಗತಾಪ್ ಪರ ಹಡಪ್ಸರ್ ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪವಾರ್, ಕಳೆದ ಎರಡು ವರ್ಷಗಳಲ್ಲಿ ಮಹಿಳೆಯರು ಕಿರುಕುಳದ ಆರೋಪದ ಮೇಲೆ 67,381 ದೂರುಗಳನ್ನು ದಾಖಲಿಸಿದ್ದಾರೆ. “ಛತ್ರಪತಿ ಶಿವಾಜಿ ಮಹಾರಾಜ್, ಮಹಾತ್ಮಾ ಫುಲೆ, ಸಾವಿತ್ರಿಬಾಯಿ ಫುಲೆ ಮತ್ತು ಜೀಜಾಮಾತಾ ಅವರ ಭೂಮಿಯಾದ ಮಹಾರಾಷ್ಟ್ರದಲ್ಲಿ ಇದು ನಡೆಯುತ್ತಿದೆ” ಎಂದು ಕಿಡಿಕಾರಿದ್ದಾರೆ.
ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದಂತೆ ಪ್ರತಿ ಗಂಟೆಗೆ ಐದು ದೂರುಗಳು ದಾಖಲಾಗುತ್ತಿವೆ. ಪ್ರಸ್ತುತ 64,000 ಮಹಿಳೆಯರು ಮತ್ತು ಬಾಲಕಿಯರು ಕಾಣೆಯಾಗಿದ್ದಾರೆ ಎಂದು ಮಹಾರಾಷ್ಟ್ರ ಸರ್ಕಾರ ವರದಿ ಮಾಡಿದೆ ಎಂದು ಅವರು ಹೇಳಿದರು. ಮಹಾರಾಷ್ಟ್ರದಂತಹ ರಾಜ್ಯಕ್ಕೆ ಈ ಪರಿಸ್ಥಿತಿ ಸೂಕ್ತವೇ? ಆದರೆ ಅಧಿಕಾರದಲ್ಲಿರುವವರು ಇದರ ಬಗ್ಗೆ ತಲೆಕೆಡಿಸಿಕೊಳ್ಳುವಂತೆ ಕಾಣುತ್ತಿಲ್ಲ. ನಾಗ್ಪುರದಲ್ಲಿ ಸುಮಾರು 13,000 ಬಾಲಕಿಯರು ಕಾಣೆಯಾಗಿದ್ದಾರೆ ಎಂದು ಅವರು ಹೇಳಿದರು.
ನಾಗ್ಪುರವು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ತವರು ಜಿಲ್ಲೆಯಾಗಿದ್ದು, ಅವರು ಏಕನಾಥ್ ಶಿಂಧೆ ಸರ್ಕಾರದಲ್ಲಿ ಗೃಹ ಖಾತೆಯನ್ನು ಸಹ ಹೊಂದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj




























