ಟ್ರಕ್ ಗೆ ಡಬಲ್ ಡೆಕ್ಕರ್ ಬಸ್ ಡಿಕ್ಕಿ: 5 ತಿಂಗಳ ಮಗು ಸೇರಿ 5 ಮಂದಿ ಸಾವು - Mahanayaka

ಟ್ರಕ್ ಗೆ ಡಬಲ್ ಡೆಕ್ಕರ್ ಬಸ್ ಡಿಕ್ಕಿ: 5 ತಿಂಗಳ ಮಗು ಸೇರಿ 5 ಮಂದಿ ಸಾವು

21/11/2024


Provided by

ಉತ್ತರ ಪ್ರದೇಶದ ಅಲಿಗಢದ ಯಮುನಾ ಎಕ್ಸ್ ಪ್ರೆಸ್ ವೇಯಲ್ಲಿ ಖಾಸಗಿ ಡಬಲ್ ಡೆಕ್ಕರ್ ಬಸ್ ಅಪಘಾತದಲ್ಲಿ ಐದು ತಿಂಗಳ ಮಗು ಮತ್ತು ಮಹಿಳೆ ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ.

ದೆಹಲಿಯಿಂದ ಅಜಂಗಢಕ್ಕೆ ಪ್ರಯಾಣಿಸುತ್ತಿದ್ದ ಬಸ್ ಹಿಂದಿನಿಂದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಬಸ್ ಛಿದ್ರಗೊಂಡು, ದೇಹಗಳು ಮತ್ತು ಪ್ರಯಾಣಿಕರು ಒಳಗೆ ಸಿಲುಕಿಕೊಂಡರು‌.

ಈ ಅಪಘಾತದಲ್ಲಿ 11 ತಿಂಗಳ ಹೆಣ್ಣು ಮಗು, ಐದು ವರ್ಷದ ಮಗು, ಮೂವರು ಮಹಿಳೆಯರು ಮತ್ತು ಒಂಬತ್ತು ಪುರುಷರು ಸೇರಿದಂತೆ 15 ಜನರು ಗಾಯಗೊಂಡಿದ್ದಾರೆ. ಸ್ಥಳೀಯರು ಬಸ್ ಕಿಟಕಿಗಳನ್ನು ಒಡೆದು ಗಾಯಾಳುಗಳನ್ನು ರಕ್ಷಿಸಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಜೇವರ್ ನ ಕೈಲಾಶ್ ಆಸ್ಪತ್ರೆಗೆ ಸಾಗಿಸಲಾಯಿತು.

ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅವರು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕಳುಹಿಸಿದ್ದಾರೆ. ಮೂರು ಶವಗಳನ್ನು ಗುರುತಿಸಲಾಗಿದ್ದು, ಇಬ್ಬರನ್ನು ಗುರುತಿಸಲಾಗಿಲ್ಲ.
ಬಸ್ ಫೈಜಾಬಾದ್ ಮೂಲದ ಕೃಷ್ಣ ಟ್ರಾವೆಲ್ಸ್ ಕಂಪನಿಗೆ ಸೇರಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ