ಮೋದಿ ವಿರುದ್ಧ ಘೋಷಣೆ ‌ಕೂಗದಂತೆ & ಪ್ರತಿಭಟಿಸದಂತೆ ದಿಲ್ಲಿ ಜಾಮಿಯಾ ಮಿಲ್ಲಿಯಾ ವಿವಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ - Mahanayaka
12:49 PM Monday 15 - September 2025

ಮೋದಿ ವಿರುದ್ಧ ಘೋಷಣೆ ‌ಕೂಗದಂತೆ & ಪ್ರತಿಭಟಿಸದಂತೆ ದಿಲ್ಲಿ ಜಾಮಿಯಾ ಮಿಲ್ಲಿಯಾ ವಿವಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ

02/12/2024

ಪ್ರಧಾನಿ ನರೇಂದ್ರ ಮೋದಿ, ಕಾನೂನು ಜಾರಿ ಸಂಸ್ಥೆಗಳ ವಿರುದ್ದ ಕ್ಯಾಂಪಸ್‌ ಒಳಗಡೆ ಘೋಷಣೆಗಳನ್ನು ಕೂಗದಂತೆ ಮತ್ತು ಪ್ರತಿಭಟಿಸದಂತೆ ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ. ಈ ಕುರಿತು ಹೇಳಿಕೆ ಪ್ರಕಟಿಸಿರುವ ಎಐಎಸ್ಎ, “ಈ ನಿರ್ದೇಶನವು ಕೇವಲ ವಿದ್ಯಾರ್ಥಿಗಳ ಮೇಲಿನ ದಾಳಿಯಲ್ಲ. ಇದು ವಿಶ್ವವಿದ್ಯಾನಿಲಯದ ಮೂಲತತ್ವದ ಮೇಲಿನ ದಾಳಿಯಾಗಿದೆ. ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕುವ ಬಿಜೆಪಿಯ ದೊಡ್ಡ ಯೋಜನೆಯ ಭಾಗವಾಗಿದೆ ಎಂದು ಕಿಡಿಕಾರಿದೆ.


Provided by

ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಪ್ರದಾನಿ ಮೋದಿ ಸಹಿತ ‘ಸಾಂವಿಧಾನಿಕ ಗಣ್ಯರ’ ವಿರುದ್ಧ ಪ್ರತಿಭಟನೆಗಳು ಮತ್ತು ಧರಣಿಗಳನ್ನು ಅನುಮತಿಸಲಾಗುವುದಿಲ್ಲ. ನಿಯಮ ಉಲ್ಲಂಘಿಸಿದರೆ ಕಠಿಣ ಶಿಸ್ತು ಕ್ರಮ ಕೈಗೊಳ್ಳುವುದಾಗಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಲಾಗಿದೆ”.

ಈ ಕುರಿತು ಜ್ಞಾಪಕ ಪತ್ರ ಹೊರಡಿಸಿರುವ ವಿವಿಯ ರಿಜಿಸ್ಟ್ರಾರ್ ಎಂ.ಡಿ ಮಹತಾ ಆಲಂ ರಿಝ್ವಿ, “ಕೆಲವು ವಿದ್ಯಾರ್ಥಿಗಳು ಪೂರ್ವಾನುಮತಿ ಪಡೆಯದೆ ಶಿಕ್ಷಣ ಮತ್ತು ವಿವಿಗೆ ಸಂಬಂಧಿಸದಂತೆ ವಿಷಯಗಳನ್ನು ಮುಂದಿಟ್ಟುಕೊಂಡು ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿ ಮತ್ತು ದೇಶದ ಇತರ ಕಾನೂನು ಜಾರಿ ಸಂಸ್ಥೆಗಳ ವಿರುದ್ಧ ಘೋಷಣೆ ಕೂಗುವುದು, ಪ್ರತಿಭಟಿಸುವುದನ್ನು ವಿವಿ ಗಮನಿಸಿದೆ ಎಂದಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ