ನಮ್ಮ ಮುಖ್ಯಮಂತ್ರಿಗಳು ಹೇಳಿದ ನಂತರ ಅವರು ಹೇಳಿದ್ದೇ ಫೈನಲ್: ಡಿ.ಕೆ.ಶಿವಕುಮಾರ್ - Mahanayaka

ನಮ್ಮ ಮುಖ್ಯಮಂತ್ರಿಗಳು ಹೇಳಿದ ನಂತರ ಅವರು ಹೇಳಿದ್ದೇ ಫೈನಲ್: ಡಿ.ಕೆ.ಶಿವಕುಮಾರ್

d k shivakumar
04/12/2024

ಬೆಂಗಳೂರು: ನಮ್ಮ ಮುಖ್ಯಮಂತ್ರಿಗಳು ಹೇಳಿದ ನಂತರ ಅವರು ಹೇಳಿದ್ದೇ ಫೈನಲ್ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.


Provided by

ಸಿಎಂ ಸ್ಥಾನದ ವಿಚಾರದಲ್ಲಿ ಯಾವುದೇ ಒಪ್ಪಂದವಾಗಿಲ್ಲ ಎನ್ನುವ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಪಕ್ಷಕ್ಕೆ ವಿಧೇಯನಾಗಿದ್ದೇನೆ. ಸಿಎಂ ಹೇಳಿದ ಮೇಲೆ ಯಾವುದೇ ತಕರಾರಿಲ್ಲ ಎಂದಿದ್ದಾರೆ.

ಇನ್ನೂ ಲೋಕಾಯುಕ್ತಕ್ಕೆ  ಇಡಿ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಯಾವುದೇ ವಿಚಾರಣೆ ಗುಪ್ತವಾಗಿ ನಡೆಯುತ್ತದೆ. ಏನಾದರೂ ಇದ್ದರೆ, ಕೋರ್ಟ್ ಗೆ ಸಲ್ಲಿಸಬೇಕು. ಆದರೆ ನ್ಯಾಯಾಲಯಕ್ಕೆ ಸಲ್ಲಿಸದೇ ಮಾಧ್ಯಮಕ್ಕೆ ಬಿಡುಗಡೆ ಮಾಡುತ್ತೇವೆ ಎಂದರೆ ಹೇಗೆ ಎಂದು ಇಡಿಯ ನಡೆಯ ಬಗ್ಗೆ ಪ್ರಶ್ನಿಸಿದರು.

ನಮಗೆ ನ್ಯಾಯಾಲಯದಲ್ಲಿ ನಂಬಿಕೆ ಇದೆ. ನಮ್ಮ ಪಕ್ಷ ಮತ್ತು ಸರ್ಕಾರ ಒಟ್ಟಿಗೆ ಹೋರಾಟ ಮಾಡುತ್ತದೆ ಎಂದು ಅವರು ಇದೇ ವೇಳೆ ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ