ಆರ್ ಬಿಐಗೆ ಇ-ಮೇಲ್ ಮೂಲಕ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ: ಒಂದು ತಿಂಗಳಲ್ಲಿ 2ನೇ ಬಾರಿ ಬೆದರಿಕೆ - Mahanayaka

ಆರ್ ಬಿಐಗೆ ಇ-ಮೇಲ್ ಮೂಲಕ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ: ಒಂದು ತಿಂಗಳಲ್ಲಿ 2ನೇ ಬಾರಿ ಬೆದರಿಕೆ

13/12/2024


Provided by

ಒಂದು ತಿಂಗಳಲ್ಲಿ ಎರಡನೇ ಬಾರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಕ್ಕೆ ಇಮೇಲ್ ಮೂಲಕ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದೆ. ಗುರುವಾರ ಮಧ್ಯಾಹ್ನ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ ಸೈಟ್ ಗೆ ಬೆದರಿಕೆ ಇಮೇಲ್ ಕಳುಹಿಸಲಾಗಿದ್ದು, ಅದರಲ್ಲಿ ಆರ್ ಬಿಐಯನ್ನು ಸ್ಫೋಟಿಸುವ ಬಗ್ಗೆ ಉಲ್ಲೇಖಿಸಲಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ ಸೈಟ್ ಗೆ ಬೆದರಿಕೆ ಇಮೇಲ್ ಬಂದಿದೆ. ಇಮೇಲ್ ರಷ್ಯನ್ ಭಾಷೆಯಲ್ಲಿತ್ತು, ಬ್ಯಾಂಕ್ ಅನ್ನು ಸ್ಫೋಟಿಸುವುದಾಗಿ ಎಚ್ಚರಿಕೆ ನೀಡಲಾಯಿತು. ಅಪರಿಚಿತ ಆರೋಪಿಯ ವಿರುದ್ಧ ಮಾತಾ ರಮಾಬಾಯಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮುಂಬೈ ಪೊಲೀಸ್ ವಲಯ 1 ಡಿಸಿಪಿ ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ