ಫೈನಲ್ ಆಟವೊಂದೇ ಬಾಕಿಯಿತ್ತು, ಆಗಲೇ ಹೃದಯಾಘಾತಕ್ಕೆ ಬಲಿಯಾದ ಪ್ರತಿಭಾನ್ವಿತ ಕಬಡ್ಡಿ ಆಟಗಾರ
ಮಂಡ್ಯ: ಕಬ್ಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸುಖಧರೆ ಗ್ರಾಮದಲ್ಲಿ ನಡೆದಿದೆ.ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಮುಟ್ಲುಪಾಡಿಯ ಪ್ರೀತಂ ಶೆಟ್ಟಿ (24) ಮೃತಪಟ್ಟ ಯುವಕನಾಗಿದ್ದಾನೆ.
ಸುಖಧರೆ ಗ್ರಾಮದಲ್ಲಿ ಹನುಮ ಜಯಂತಿ ಹಿನ್ನೆಲೆ ತಡರಾತ್ರಿ ಪ್ರೊ.ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿತ್ತು. ಪ್ರೀತಂ ಕಬಡ್ಡಿ ಪಂದ್ಯಾಟ ಮುಗಿಸಿ ರೆಸ್ಟ್ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿದ್ದಾರೆ.
ಲೀಗ್, ಸೆಮಿ ಎಲ್ಲ ಆಟಗಳನ್ನು ಗೆದ್ದು ಬಹುನಿರೀಕ್ಷಿತ ಆಟಗಾರನಾಗಿ ಪ್ರೀತಂ ಹೊರಹೊಮ್ಮಿದ್ದರು. ಫೈನಲ್ ಆಟ ಒಂದೇ ಬಾಕಿಯಿತ್ತು. ಆದರೆ ಪ್ರಕೃತಿಯ ಆಟ ಬೇರೆಯೇ ಆಗಿತ್ತು. ಪ್ರೀತಂ ಶೆಟ್ಟಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಪ್ರೀತಂ ಶೆಟ್ಟಿ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಮುಟ್ಲುಪಾಡಿ ಗ್ರಾಮದ ನಿವಾಸಿಯಾಗಿದ್ದಾರೆ. ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಹೃದಯಾಘಾತದಿಂದ ಕುಸಿದು ಬಿದ್ದ ತಕ್ಷಣವೇ ಅವರನ್ನು ನಾಗಮಂಗಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97




























