ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ತುಳಸಿ ಗೌಡ ನಿಧನ - Mahanayaka
3:45 AM Saturday 18 - October 2025

ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ತುಳಸಿ ಗೌಡ ನಿಧನ

tulsi gowda
16/12/2024

ಕಾರವಾರ: ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ತುಳಸಿ ಗೌಡ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.  ಅವರಿಗೆ 86 ವರ್ಷ ವಯಸ್ಸಾಗಿತ್ತು.


Provided by

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡ ಅವರು ವೃಕ್ಷಮಾತೆ ಎಂದೇ ಕರೆಯಲ್ಪಡುತ್ತಿದ್ದರು.  ಹಾಲಕ್ಕಿ ಸಮುದಾಯದ ತಾಯಿ, ಲಕ್ಷಾಂತರ ಮರಗಳನ್ನ ಬೆಳೆಸಿ ಪರಿಸರಕ್ಕೆ ಬೃಹತ್ ಕೊಡುಗೆ ನೀಡಿದ್ದಾರೆ.

ಇವರ ಪರಿಸರ ಪ್ರೇಮವನ್ನು ಮೆಚ್ಚಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಶ್ರೀ ನೀಡಿ ಗೌರವಿಸಲಾಗಿತ್ತು. 1944ರಲ್ಲಿ ಹೊನ್ನಳ್ಳಿ ಗ್ರಾಮದಲ್ಲಿ ನಾರಾಯಣ ಹಾಗೂ ನೀಲಿ ದಂಪತಿಗೆ ಜನಿಸಿದ ತುಳಸಿ ಅವರು ಕಾಡಿನಲ್ಲೇ ಪ್ರಕೃತಿಯ ನಡುವೆ ಬೆಳೆದವರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ