ಚಿಕ್ಕಮಗಳೂರಿಗೆ ಆಗಮಿಸಿದ ಸಿ.ಟಿ.ರವಿಗೆ ಕಾರ್ಯಕರ್ತರಿಂದ ಅದ್ದೂರಿಯ ಸ್ವಾಗತ! - Mahanayaka
4:35 PM Wednesday 17 - December 2025

ಚಿಕ್ಕಮಗಳೂರಿಗೆ ಆಗಮಿಸಿದ ಸಿ.ಟಿ.ರವಿಗೆ ಕಾರ್ಯಕರ್ತರಿಂದ ಅದ್ದೂರಿಯ ಸ್ವಾಗತ!

c t ravi
22/12/2024

ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ಅವರ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದ ಹಿನ್ನಲೆಯಲ್ಲಿ ಬಂಧನಕ್ಕೆ ಒಳಗಾದ ಬಳಿಕ ಸಿ.ಟಿ.ರವಿ ಜಿಲ್ಲೆಗೆ ಆಗಮಿಸಿದ ಹಿನ್ನಲೆ ಅವರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಸ್ವಾಗತ ಕೋರಿದರು.

ತಾಲೂಕಿನ ಮಾಗಡಿ ಹ್ಯಾಂಡ್ ಪೋಸ್ಟ್ ಬಳಿ ಪಟಾಕಿ ಸಿಡಿಸಿ ಹೂವಿನ ಹಾರ ಹಾಕಿ ಸ್ವಾಗತ ಕೋರಿ ಸಂಭ್ರಮಿಸಿದರು.  ಅಲ್ಲಿಂದ ನೆರವಾಗಿ ವಾಹನಗಳ ಮೂಲಕ ಆಜಾದ್ ಪಾರ್ಕ್ ನಲ್ಲಿ ಜೆಸಿಬಿ ಮೂಲಕ‌ ಪುಷ್ಪಾರ್ಚನೆ ಮಾಡಿ ಜೈಕಾರ ಹಾಕಿ ಸಂಭ್ರಮಿಸಿದರು.

ನಂತರ ಆಜಾದ್ ಪಾರ್ಕ್ ಮೂಲಕ ಎಂ.ಜಿ.ರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ಹನುಮಂತಪ್ಪ ವೃತ್ತದಲ್ಲಿ ಬೃಹತ್ ಹೂವಿನ ಹಾರ ಹಾಕಿ ಸಂಭ್ರಮಿಸಿದರು.

ಸಿ.ಟಿ.ರವಿ ಅವರ ಆಗಮನದ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ನಗರದಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದ  ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲೆಯ ಕಡೂರು, ತರೀಕೆರೆ, ಕೊಪ್ಪ, ನರಸಿಂಹರಾಜಪುರ  ಸೇರಿದಂತೆ ವಿವಿಧ ಪೊಲೀಸ್ ಠಾಣೆಯ ಸಾವಿರಾರು ಪೊಲೀಸರನ್ನು ನಗರದಲ್ಲಿ ನಿಯೋಜಿಸಲಾಗಿತ್ತು.

ಚಳಿಯ ನಡುವೆ ಪುರುಷ ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಗಳು ಹಿಡಿಶಾಪ ಹಾಕುತ್ತಾ ಕರ್ತವ್ಯದಲ್ಲಿ ನಿರತರಾಗಿರುವುದು ಕಂಡುಬಂತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ