ಮಲಗಿದ್ದವನನ್ನು  ಸೊಂಡಿಲಿನಿಂದ ಎತ್ತಿ ಎಸೆದ ಕಾಡಾನೆ - Mahanayaka
8:19 PM Thursday 16 - October 2025

ಮಲಗಿದ್ದವನನ್ನು  ಸೊಂಡಿಲಿನಿಂದ ಎತ್ತಿ ಎಸೆದ ಕಾಡಾನೆ

chikkamagaluru
12/01/2025

ಚಿಕ್ಕಮಗಳೂರು : ಕಣದಲ್ಲಿ ಮಲಗಿದ್ದ ವ್ಯಕ್ತಿಯನ್ನು ಒಂಟಿ ಸಲಗವೊಂದು ಸೊಂಡಿಲಿನಿಂದ ಎತ್ತಿ ಎಸೆದ ಘಟನೆ ನಡೆದಿದ್ದು, ವ್ಯಕ್ತಿ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.


Provided by

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಹುಕ್ಕುಂದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾರಾಯಣಗೌಡ ಎಂಬವರು ಹುಲ್ಲಿನ ಕಣದ ಬಳಿ ಚಾಪೆ ಹಾಸಿಕೊಂಡು ಮಲಗಿದ್ದರು. ಬೆಳಗಿನ ಜಾವ 5 ಗಂಟೆಯ ಸುಮಾರಿಗೆ ಕಾಡಾನೆ ಇದೇ ದಾರಿಯಲ್ಲಿ ಬಂದಿದೆ. ಮಲಗಿದ್ದ ನಾರಾಯಣಗೌಡ ಅವರನ್ನು ಸೊಂಡಿಲಿನಿಂದ ಎತ್ತಿ ಎಸೆದಿದೆ. ಈ ವೇಳೆ ಹುಲ್ಲಿನ ರಾಶಿ ಮೇಲೆ ಅವರು ಬಿದ್ದಿದ್ದಾರೆ ಹೀಗಾಗಿ ಅಪಾಯದಿಂದ ಪಾರಾಗಿದ್ದಾರೆ.

ಆನೆಯ ದಾಳಿಯಿಂದ ಕೂದಲೆಳೆ ಅಂತರದಲ್ಲಿ ನಾರಾಯಣಗೌಡ ಪಾರಾಗಿದ್ದಾರೆ. ಆದರೆ, ಅವರ ತಲೆ ಹಾಗೂ ಕಾಲಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಲ್ದೂರು ಸುತ್ತಮುತ್ತ ಒಂಟಿ ಸಲಗದ ಹಾವಳಿ ಮಿತಿಮೀರುತ್ತಿದೆ.  ಕೂಡಲೇ ಒಂಟಿ ಸಲಗವನ್ನ ಸ್ಥಳಾಂತರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.  ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ  ಪರಿಶೀಲನೆ ನಡೆಸಿದ್ದಾರೆ.  ಚಿಕ್ಕಮಗಳೂರು ತಾಲೂಕಿನ ಆಲ್ದೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/Ci8F6ckDmAbCBQyqgLqOPx

ಇತ್ತೀಚಿನ ಸುದ್ದಿ