ರಮೇಶ್ ಜಾರಕಿಹೊಳಿ ಪರ ಸಿಎಂ ಯಡಿಯೂರಪ್ಪ ಬ್ಯಾಟಿಂಗ್! - Mahanayaka

ರಮೇಶ್ ಜಾರಕಿಹೊಳಿ ಪರ ಸಿಎಂ ಯಡಿಯೂರಪ್ಪ ಬ್ಯಾಟಿಂಗ್!

bsy jarakiholi
30/03/2021


Provided by

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಮೇಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ್ದಾರೆ.

ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪೊಲೀಸ್ ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಕಾಂಗ್ರೆಸ್‌ನವರು ಇದರಲ್ಲಿ ದುರುದ್ದೇಶದ ರಾಜಕೀಯ ಮಾಡುತ್ತಿದ್ದಾರೆ.  ಶಾಸಕ ರಮೇಶ ಜಾರಕಿಹೊಳಿ ಅವರ ವಿರುದ್ಧದ ಸಿ.ಡಿ. ಪ್ರಕರಣವನ್ನು ಎಸ್‌ಐಟಿಯು ಸಂಪೂರ್ಣ ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಿದೆ ಎಂದು ಹೇಳಿದರು.

ಈ ಪ್ರಕರಣದಲ್ಲಿ ರಮೇಶ ಜಾರಕಿಹೊಳಿ ನಿರಪರಾಧಿಯಾಗಿ ಹೊರಬರುತ್ತಾರೆ. ಉಪ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗುವಂತೆ ಅವರಿಗೆ ಹೇಳಿದ್ದೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಮಾತನಾಡುತ್ತಿಲ್ಲದಿರುವುದನ್ನು ನೋಡಿದರೆ ಅವರಲ್ಲೇ ಹುಳುಕಿದೆ ಎನಿಸುತ್ತದೆ ಎಂಬ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಿತ್ಯವೂ ಗೃಹ ಸಚಿವರಿಂದ ಮಾಹಿತಿ ಪಡೆಯುತ್ತಿದ್ದೇನೆ. ಸಿದ್ದರಾಮಯ್ಯ ಜವಾಬ್ದಾರಿ ಸ್ಥಾನದಲ್ಲಿದ್ದು ಅದಕ್ಕೆ ತಕ್ಕಂತೆ ಮಾತನಾಡಬೇಕು

ಇತ್ತೀಚಿನ ಸುದ್ದಿ