ಕಾಫಿನಾಡ ಕಳಸದಲ್ಲಿ ಕಾಡ್ಗಿಚ್ಚಿಗೆ ಸುಟ್ಟು ಕರಕಲಾದ ಅರಣ್ಯ - Mahanayaka
6:13 AM Sunday 14 - September 2025

ಕಾಫಿನಾಡ ಕಳಸದಲ್ಲಿ ಕಾಡ್ಗಿಚ್ಚಿಗೆ ಸುಟ್ಟು ಕರಕಲಾದ ಅರಣ್ಯ

kalasa
09/02/2025

ಚಿಕ್ಕಮಗಳೂರು: ಕಾಫಿನಾಡ ಕಳಸದಲ್ಲಿ ಕಾಡ್ಗಿಚ್ಚಿಗೆ ಅರಣ್ಯ ಸುಟ್ಟು ಕರಕಲಾಗಿದೆ. ಕಾಡ್ಗಿಚ್ಚಿನ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆ‌ಯಾಗಿದೆ.


Provided by

ಕಳಸ ತಾಲೂಕಿನ ಆನೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಉಂಟಾಗಿದೆ. ಇದರ ಪರಿಣಾಮ ಹತ್ತಾರು ಎಕರೆ ಅರಣ್ಯ ಸಂಪೂರ್ಣ ಬೆಂಕಿಗಾಹುತಿಯಾಗಿದೆ.

ಗುಡ್ಡದ ತುದಿಯಲ್ಲಿ ಬೆಂಕಿ ಬಿದ್ದ ಪರಿಣಾಮ ಬೆಂಕಿ ನಂದಿಸಲು ಅಧಿಕಾರಿಗಳ ಹರಸಾಹಸಪಡುವಂತಾಗಿದೆ. ಗುಡ್ಡದ ಒಂದು ಭಾಗ ಹಸಿರಿನಿಂದ ಕೂಡಿದ್ದು, ಮತ್ತೊಂದು ಭಾಗ ಸಂಪೂರ್ಣ ಒಣಗಿ ನಿಂತಿದೆ, ಪ್ರವಾಸಿಗರು, ಜನರೇ ಹೋಗದ ಜಾಗದಲ್ಲಿ ಹೇಗೆ ಬೆಂಕಿ ಹತ್ತಿದೆ ಅನ್ನೋ ಅನುಮಾನ ಸೃಷ್ಟಿಯಾಗಿದೆ.

ಬಿಸಿಲ ಧಗೆಗೆ ಬೆಂಕಿ ಹೊತ್ತಿರಬಹುದೆಂಬ ಶಂಕೆ ಸದ್ಯ ಕೇಳಿ ಬಂದಿದೆ.  ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಆನೆಗುಡ್ಡ ಮೀಸಲು ಅರಣ್ಯದಲ್ಲಿ ಈ ದುರ್ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ