ಕ್ರೈಸ್ತ ಸನ್ಯಾಸಿನಿಯರಿಗೆ ರೈಲಿನಲ್ಲಿ ಕಿರುಕುಳ ನೀಡಿದ ಇಬ್ಬರು ಆರೋಪಿಗಳ ಬಂಧನ - Mahanayaka
12:57 PM Thursday 16 - October 2025

ಕ್ರೈಸ್ತ ಸನ್ಯಾಸಿನಿಯರಿಗೆ ರೈಲಿನಲ್ಲಿ ಕಿರುಕುಳ ನೀಡಿದ ಇಬ್ಬರು ಆರೋಪಿಗಳ ಬಂಧನ

jancy raliway
02/04/2021

ಝಾನ್ಸಿ:  ಕ್ರೈಸ್ತ ಸನ್ಯಾಸಿನಿಯರಿಗೆ ರೈಲಿನಲ್ಲಿ ಹಲ್ಲೆ ನಡೆಸಿ, ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.


Provided by

ಅಂಚಲ್‌ ಅಜಾರಿಯಾ ಹಾಗೂ ಪುರುಕೇಶ್‌ ಅಮರ್ಯಾ ಬಂಧಿತ ಆರೋಪಿಗಳಾಗಿದ್ದಾರೆ. ಇವರ ವಿರುದ್ಧ ಶಾಂತಿ ಕದಡಿದ ಮತ್ತು ಕಿರುಕುಳ ನೀಡಿದ ಪ್ರಕರಣಗಳನ್ನು ದಾಖಲಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ತಿಂಗಳು ಕ್ರೈಸ್ತ ಸನ್ಯಾನಿಯರು ರಜೆಯ ನಿಮಿತ್ತ ತಮ್ಮ ಊರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಝಾನ್ಸಿಯಲ್ಲಿ, ಮತಾಂತರ ಮಾಡಲಾಗುತ್ತಿದೆ ಎಂದು ಸಂಘ ಪರಿವಾರದ ಕಾರ್ಯಕರ್ತರು ಕ್ರೈಸ್ತ ಸನ್ಯಾಸಿನಿಯರ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಿದ್ದರು. ಈ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ:

ರೈಲಿನಲ್ಲಿ ನಾಲ್ವರು ಕ್ರೈಸ್ತ ಸನ್ಯಾಸಿನಿಯರ ಮೇಲೆ ಬಜರಂಗದಳ ದಾಳಿ

ಇತ್ತೀಚಿನ ಸುದ್ದಿ